ಗೋವುಗಳ ಹತ್ಯೆ, ಅಕ್ರಮ ಸಾಗಾಟ ತಡೆಯಿರಿ: ಜಿಲ್ಲಾಡಳಿತಕ್ಕೆ ವಿಎಚ್‌ಪಿ, ಬಜರಂಗದಳ ಒತ್ತಾಯ -ಕಹಳೆ ನ್ಯೂಸ್
ಮಂಗಳೂರು: 'ದೇಶದಲ್ಲಿ ಗೋವುಗಳ ಹತ್ಯೆಯನ್ನು ಹಾಗೂ ಅವುಗಳನ್ನು ಹಿಂಸಾತ್ಮಕವಾಗಿ ಸಾಗಿಸುವುದನ್ನು ನಿಷೇಧಿಸಲಾಗಿದೆ. ಬಕ್ರೀದ್ ಮತ್ತು ಇತರ ಹಬ್ಬಗಳ ಸಂದರ್ಭದಲ್ಲಿ ಗೋವುಗಳ ಹತ್ಯೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು' ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳ ಒತ್ತಾಯಿಸಿವೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ವಿಎಚ್‌ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್., 'ರಾಜ್ಯದಲ್ಲಿ ಜಾನುವಾರು ಹತ್ಯೆ ತಡೆ ಮತ್ತು ಸಂರಕ್ಷಣೆ ಕಾಯ್ದೆ ಜಾರಿಯಲ್ಲಿದ್ದು, ಅದರ ಪ್ರಕಾರ...







