ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಭಾರಿ ಮಳೆ: ತೆರವುಗೊಳ್ಳದ ಕಿಂಡಿ ಅಣೆಕಟ್ಟೆ ಹಲಗೆ- ಕಹಳೆ ನ್ಯೂಸ್
ಬೆಳ್ತಂಗಡಿ: ಮುಂಡಾಜೆ ಮತ್ತು ಕಲ್ಮಂಜ ಗ್ರಾಮದಲ್ಲಿ ಹರಿಯುವ ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳಲ್ಲಿರುವ ಕಿಂಡಿ ಅಣೆಕಟ್ಟೆಗಳ ಹಲಗೆ ತೆರವು ಕಾರ್ಯ ಪೂರ್ಣಗೊಳ್ಳದ ಕಾರಣ ಮುಂಡಾಜೆ ಮತ್ತು ಕಲ್ಮಂಜ ಗ್ರಾಮಗಳಲ್ಲಿ ಭಾನುವಾರ ಪ್ರವಾಹ ಭೀತಿ ಉಂಟಾಯಿತು. ಭಾನುವಾರ ಭಾರಿ ಮಳೆಯಾಗಿದ್ದು, ನೇತ್ರಾವತಿ ಮತ್ತು ಮೃತ್ಯುಂಜಯ, ಫಲ್ಗುಣಿ, ಸೋಮಾವತಿ ನದಿಗಳು ತುಂಬಿ ಹರಿದವು. ಇಲ್ಲಿನ ಆನಂಗಳ್ಳಿ, ಪಜಿರಡ್ಕ, ಕಾಪು ಮೊದಲಾದ ಕಡೆಯ ಕಿಂಡಿ ಅಣೆಕಟ್ಟುಗಳ ಹಲಗೆ ತೆರವುಗೊಳಿಸಿಲ್ಲ. ಪಜಿರಡ್ಕ ಕಿಂಡಿ ಅಣೆಕಟ್ಟೆ ನೇತ್ರಾವತಿ ಹಾಗೂ...







