Thursday, May 7, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಅಚಲ್ ಬಿಳಿನೆಲೆ ಆಯ್ಕೆ-ಕಹಳೆ ನ್ಯೂಸ್

ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ "ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್" ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಹಿಂದಿನ ಕಾಲದ ಗುರುಕುಲ ಶಿಕ್ಷಣ ಸಂಪ್ರದಾಯದ ಅನುಭವ ಪಡೆಯುವ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಟ ಗುರುಗಳ ಜೀವನ ವಿಧಾನಕ್ಕೆ ಒಡ್ಡಿಕೊಳ್ಳುವ ಪ್ರಯತ್ನವಾಗಿರುವ ಈ ಯೋಜನೆಯು ಬೇಸಿಗೆ ರಜೆಯಲ್ಲಿ ಒಂದು ತಿಂಗಳ ಕಾಲ ತಮ್ಮ ಕಲಾ ಕ್ಷೇತ್ರದ ಗುರುವಿನೊಂದಿಗಿದ್ದು ಅಭ್ಯಾಸ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ -ಕಹಳೆ ನ್ಯೂಸ್

ನೇಲ್ಯಡ್ಕ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್‌ ತರಬೇತಿ ಶಿಬಿರದ ಉದ್ಘಾಟನೆ ಏಪ್ರಿಲ್ 27 ರಂದು ನೇಲ್ಯಡ್ಕದಲ್ಲಿ ನಡೆಯಿತು. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಕೌಶಲ್ಯ NRLM ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ ಕೆ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಧಾರ್ಮಿಕ ಕಾರ್ಯಕ್ರಮಗಳಿಗೆ ಸದಾ ಸಹಕಾರ – ಪಂಜಿಗುಡ್ಡೆ ಈಶ್ವರ ಭಟ್ -ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆಯಾದ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ 'ಕುಂಕುಮ ಮಹತಿ' ಯು ರವಿವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಚೇರಿ ಸಭಾಂಗಣ ದಲ್ಲಿ ಲೋಕಾರ್ಪಣೆಗೊಂಡಿತು. ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ, ಮುಳಿಯ ಪ್ರತಿಷ್ಠಾನ ಪುತ್ತೂರು ಸಹಯೋಗದಲ್ಲಿ ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ರಸ್ತೆ ತಡೆದು ಪ್ರತಿಭಟನೆ: ಪ್ರತಿಭಟನಾಕಾರರ ವಿರುದ್ಧ ಕೇಸು ದಾಖಲು-ಕಹಳೆ ನ್ಯೂಸ್

ಪುತ್ತೂರು: ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಎ.26ರಂದು ಬೆಳಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಮುಖ್ಯರಸ್ತೆಯ ಮಧ್ಯದಲ್ಲಿ ಕುಳಿತು ಸುಗಮ ಸಂಚಾರಕ್ಕೆ, ತುರ್ತು ವೈದ್ಯಕೀಯ ಸೇವೆಗೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಪ್ರತಿಭಟನಾಕಾರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ.25ರಂದು ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಶಾಜ್ಯೋತಿ ಕೆ ಪುತ್ತೂರಾಯ ಅವರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ವಾಟ್ಸಪ್‌ನಲ್ಲಿ ಕೋಮು ದ್ವೇಷ ಸೃಷ್ಟಿಯ ಸಂದೇಶ ; ಪ್ರಕರಣ ದಾಖಲು-ಕಹಳೆ ನ್ಯೂಸ್

ಪುತ್ತೂರು: ವಾಟ್ಸಪ್ ಗ್ರೂಪ್‌ಗಳಲ್ಲಿ ಕೋಮು ದ್ವೇಷ ಸೃಷ್ಟಿಸುವ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಏ.27ರಂದು ನಗರ ಪೊಲೀಸ್ ಠಾಣೆ ಎಸ್.ಐ ಆಂಜನೇಯ ರೆಡ್ಡಿಯವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕೆಲವು ಕಡೆ ಗುಂಪು ಗುಂಪಾಗಿ ಸಾರ್ವಜನಿಕರು ವಾಟ್ಸಪ್ ಸಂದೇಶ ನೋಡುತ್ತಿದ್ದು ವಿಚಾರಿಸಿದಾಗ ಅನು ಪುತ್ತೂರು ಎಂಬವರು ಮೊಬೈಲ್‌ನಿಂದ ಕೋಮು ದ್ವೇಷ ಭಾವನೆ ಸೃಷ್ಟಿಸುವ ಸಂದೇಶ ರವಾನಿಸಿರುವುದು ಬೆಳಕಿಗೆ ಬಂದಿತ್ತು. ಸರಕಾರಿ ಆಸ್ಪತ್ರೆಯ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿದ್ಯಾರ್ಥಿನಿಗೆ ‘ಅಶ್ಲೀಲ ಮೆಸೇಜ್’ ಕಳುಹಿಸಿ ಲೈಂಗಿಕ ಕಿರುಕುಳ : ಅನ್ಯ ಕೋಮಿನ ಯುವಕ ಅರೆಸ್ಟ್-ಕಹಳೆ ನ್ಯೂಸ್

ಬೆಳ್ತಂಗಡಿ : ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದ. ಕನ್ನಡ ಜಿಲ್ಲೆ ಬೆಳ್ತಂಗಡಿ ಕಾಲೇಜೊಂದರ ವಿದ್ಯಾರ್ಥಿನಿಗೆ ಸೈಯದ್ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಸೈಯದ್ ಮೇಲೆ ಹಲ್ಲೆ ನಡೆಸಿ ಆತನ ಮೊಬೈಲ್ ಪರಿಶೀಲನೆ ನಡೆಸಿದ್ದಾರೆ. ಈ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಿಎಂ ಸಿದ್ದರಾಮಯ್ಯ ಹೇಳಿಕೆ ದೇಶಕ್ಕೆ ಮಾಡಿದ ಅಪಮಾನ: ಕ್ಯಾ.ಬ್ರಿಜೇಶ್‌ ಚೌಟ -ಕಹಳೆ ನ್ಯೂಸ್

ಮಂಗಳೂರು: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ರಣಹೇಡಿ ಭಯೋತ್ಪಾದಕ ದಾಳಿಯ ವಿರುದ್ದ ದೇಶವೇ ಒಗ್ಗಟ್ಟಿನಿಂದ ನಿಂತಿರುವಾಗ ಸಾರ್ವಜನಿಕ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಸಂವೇದನೆ ರಹಿತರಂತೆ, ಬೇಜವಾಬ್ದಾರಿಯುತ, ಬಾಲಿಶ ಮತ್ತು ರಾಜಕೀಯ ಅಭದ್ರತೆಯಿಂದ ಕೂಡಿದ ಹೇಳಿಕೆ ನೀಡಿರುವುದು ನಿಜಕ್ಕೂ ವಿಷಾದನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಪಾಕಿಸ್ಥಾನದ ಜತೆ ಯುದ್ಧ ಸಾರುವ ಅಗತ್ಯ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡನೀಯ. ಪಹಲ್ಗಾಮ್‌ನಲ್ಲಿ ನಡೆದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರ ಬಲಿಷ್ಠ: ಸಂಸದ ಕ್ಯಾ.ಬ್ರಿಜೇಶ್‌ ಚೌಟ-ಕಹಳೆ ನ್ಯೂಸ್

ಬಂಟ್ವಾಳ: ಪುತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದಲ್ಲಿ ಕಾರ್ಯಾಚರಿಸುತ್ತಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 15ನೇ ಕಲ್ಲಡ್ಕ ಶಾಖೆಯು ಶನಿವಾರ ಕಲ್ಲಡ್ಕದ ಪ್ರೀತಿ ಟವರ್ನ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ಶಾಖೆಯನ್ನು ಉದ್ಘಾಟಿಸಿದ ದ.ಕ. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿ, ತುಳುನಾಡಿನ ಮಣ್ಣಿನ ಗುಣದ ಕಾರಣಕ್ಕೆ ದ.ಕ. ಜಿಲ್ಲೆಯ ಸಹಕಾರಿ ಕ್ಷೇತ್ರವು ಬಲಿಷ್ಠವಾಗಿದ್ದು, ಸಹಕಾರಿ ಸಂಘಗಳು ಬರೀ ಲಾಭವನ್ನೇ ನೋಡದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೆರವಾಗುವ ರೀತಿ...
1 144 145 146 147 148 727
Page 146 of 727