Sunday, June 14, 2026

ದಕ್ಷಿಣ ಕನ್ನಡ

ಕೃಷಿದಕ್ಷಿಣ ಕನ್ನಡಸುದ್ದಿಸುಳ್ಯ

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ ; ಸಂಸದ ಕ್ಯಾ. ಬ್ರಿಜೇಶ್ ಚೌಟ ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಪ್ರಗತಿಯ ಬಗ್ಗೆ ಮೆಚ್ಚುಗೆ – ಕಹಳೆ ನ್ಯೂಸ್

ಸುಳ್ಯ, ಏ. 30 : ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಬುಧವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.   ದಕ್ಷಿಣ ಕನ್ನಡ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯಸುದ್ದಿ

ಮೋದಿಯವರ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಅವಮಾನಕಾರಿ ಹೇಳಿಕೆ : ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ ಕವನ ವಾಚಿಸಿ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ ತೀವ್ರ  ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ಭರತ್ ಶೆಟ್ಟಿ, “ಸಚಿವ ಸ್ಥಾನದಲ್ಲಿರುವವರು ಈ ರೀತಿಯ ವೈಯಕ್ತಿಕ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವುದು ಅತ್ಯಂತ ದುರದೃಷ್ಟಕರ....
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

ಏಸಿ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ: ಕೃಷ್ಣರಾಜ ತಂತ್ರಿ -ಕಹಳೆ ನ್ಯೂಸ್

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ. ಇದರಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯುವುದಿಲ್ಲ ಎಂದು ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್‌ನ ನಿರ್ದೇಶಕ ಕೃಷ್ಣರಾಜ ತಂತ್ರಿ ಹೇಳಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬ್ರಹ್ಮಗಿರಿಯ ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಲಾದ ಏರ್ ಕಂಡೀಷನರ್ ಕಾರ್ಯನಿರ್ವಹಣೆ: ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಏಸಿಯು ಕೋಣೆಯಲ್ಲಿರುವ ಗಾಳಿಯನ್ನು ಶುದ್ಧಗೊಳಿಸಿ ತಂಪು ಮಾಡುತ್ತದೆ. ಹೊರತು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಇವರಿಗೆ ಗೌರವ ಸನ್ಮಾನ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಳಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಗಳಿಸಿದ್ದು ಇವರ ಈ ಸಾಧನೆಯನ್ನು ಗುರುತಿಸಿ ಟ್ರಸ್ಟ್ ನ ವತಿಯಿಂದ ಗೌರವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಮೈ ಮಾಡದಾರು ದೈವಸ್ಥಾನ ಕಡೇಶಿವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ . ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಅಮೈ ಮಾಡದಾರು, ಕಡೇಶಿವಾಲಯದ  ವಾರ್ಷಿಕ ಜಾತ್ರೋತ್ಸವದ ಗೊನೆ ಮುಹೂರ್ತ  ಏ .27 ರಂದು  ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯವರು ಶ್ರಮದಾನ ಸೇವೆಯಲ್ಲಿ ಭಾಗವಹಿಸಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬರಿಮಾರು ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ದುರಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ಬರಿಮಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ತಿಗೆ ರೂಪಾಯಿ. 30 ಸಾವಿರ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಬರಿಮಾರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೋಹಿಣಿ, ಸದಸ್ಯರಾದ ಶಶಿಪ್ರಭಾ, ನಳಿನಿ,ಶಾಲಾ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ -ಕಹಳೆ ನ್ಯೂಸ್

ಪುರಿಯ-ಮಾಲಾಡಿ, ಪುಂಜಾಲ ಕಟ್ಟೆ-  ಮಡಂತ್ಯಾರು, ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ವಿಧಾನಸಭಾ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್: ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ

ಮಂಗಳೂರು : ಹುಬೇಡಿಕೆಯ ಬೆಂಗಳೂರು- ಮಂಗಳೂರು - ಮಡಗಾಂವ್ ವಂದೇ ಭಾರತ್ ರೈಲು ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ ಇದೆ. ವಂದೇ ಭಾರತ್ ರೈಲಿಗೆ ಮುಖ್ಯವಾಗಿ ಬೇಕಾದ ರೈಲು ಮಾರ್ಗದ ವಿದ್ಯುದೀಕರಣ ಪೂರ್ಣ ಗೊಂಡು ಇದರ ಪರೀಕ್ಷೆ ಕೂಡ ನಡೆದಿದೆ. ಹಳಿಗಳ ಸಾಮರ್ಥಯ ಹೆಚ್ಚಿಸುವ ಕಾಮಗಾರಿ ಕೂಡ ನಡೆಯುತ್ತಿದೆ. ಹಾಗಾಗಿ ಪ್ರಾಯೋಗಿಕ ಸಂಚಾರ ಜೂನ್ ತಿಂಗಳಿಗಿಂತ ಮೊದಲೇ ಆರಂಭವಾಗುವ ನಿರೀಕ್ಷೆ ಇದೆ.ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ಶೀಘ್ರದಲ್ಲಿ...
1 13 14 15 16 17 740
Page 15 of 740