Thursday, May 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಏಪ್ರಿಲ್‌ 17ರ ವರೆಗೆ ರಾಜ್ಯದ 25 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ -ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಏಪ್ರಿಲ್‌ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಮುಂಗಾರು ಪೂರ್ವ ಮಳೆ ಜೋರಾಗಿರಲಿದೆ ಎಂದು ಹವಾಮಾನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಲಕ್ಕೆ ಮೌಲ್ಯ ಕೊಡಬೇಕೆಂಬುದನ್ನು ಮರೆಯಬಾರದು: ಡಾ.ವಾದಿರಾಜ ಗೋಪಾಡಿ -ಕಹಳೆ ನ್ಯೂಸ್

ಮಂಗಳೂರು: ಮನುಷ್ಯನ ಜೀವನದಲ್ಲಿ ಕಾಲಕ್ಕೆ ಮೌಲ್ಯ ಕೊಡಬೇಕೆಂಬುದನ್ನು ನಮ್ಮ ಸಮಾಜ ಕಲಿಸಿಕೊಟ್ಟಷ್ಟು ಬೇರೆಲ್ಲೂ ಕಲಿಸಿಕೊಟ್ಟಿರಲಿಕ್ಕಿಲ್ಲ. ಆ ಕಲಿಕೆಯನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ದೃಷ್ಟಿಯಿಂದ ಯುಗಾದಿ ಉತ್ಸವವನ್ನು ಆಚರಿಸಲಾಗುತ್ತದೆ,' ಎಂದು ಎಂ.ಐ.ಟಿ ಮಣಿಪಾಲದ ಪ್ರಾಧ್ಯಾಪಕ ಡಾ.ವಾದಿರಾಜ ಗೋಪಾಡಿ ಹೇಳಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಕೆಆರ್‌ಎಂಎಂಎಸ್‌) ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ಇತ್ತೀಚೆಗೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಿದ್ದ ಯುಗಾದಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಧಾರಣೆ, ಪರಿವರ್ತನೆ ನಿರಂತರ ಪ್ರಕ್ರಿಯೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಗಿಲ್ಕಿಂಜತ್ತಾಯ ದೈವಸ್ಥಾನ ವೀರಕಂಭ ಇದರ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ನೂತನ “ಶ್ರೀ ಗಿಲ್ಕಿಂಜತ್ತಾಯ ಮಹಾದ್ವಾರ” ಲೋಕಾರ್ಪಣ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ಗಿಲ್ಕಿಂಜತ್ತಾಯ ದೈವಸ್ಥಾನ ವೀರಕಂಭ ಇದರ ವರ್ಷಾವಧಿ ಜಾತ್ರಾ ಮಹೋತ್ಸವ ಏಪ್ರಿಲ್ 7 ಮತ್ತು 8 ರಂದು ಜರಗಿತು. ಈ ಸಂದರ್ಭದಲ್ಲಿ ಶ್ರೀ ಗಿಲ್ಕಿಂಜತ್ತಾಯ ಉತ್ಸವ ಸಮಿತಿ ವತಿಯಿಂದ ನಿರ್ಮಿಸಲ್ಪಟ್ಟ " ಶ್ರೀ ಗಿಲ್ಕಿಂಜತ್ತಾಯ ಮಹಾದ್ವಾರವನ್ನು ದೇವಸ್ಥಾನದ ಪ್ರಧಾನ ಅರ್ಚಕರು ಲೋಕಾರ್ಪಣೆ ಮಾಡಿದರು. ನಂತರ ದೈವದ ಬಂಡಾರವೇರಿ ಕಂಬಳ ವಲಸರಿ ಜರಗಿತು. ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭರತನಾಟ್ಯ ಕಾರ್ಯಕ್ರಮ ನಡೆಯಿತು....
ದಕ್ಷಿಣ ಕನ್ನಡಪುತ್ತೂರುಮಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ; ಸಂಸದ ಕ್ಯಾ.‌ಬ್ರಿಜೇಶ್ ಚೌಟ ಫಾಲೋ ಅಪ್ ಫಲಶ್ರುತಿ – ಕಹಳೆ ನ್ಯೂಸ್

ಮಂಗಳೂರು - ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾನ್ಯ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಇದೇ ಶನಿವಾರ ಏಪ್ರಿಲ್ 12ನೇ ತಾರೀಖಿನಂದು ನೆರವೇರಿಸಲಿದ್ದಾರೆ.. ಇದು ಸಾಕಾರಗೊಳ್ಳಲು‌ ಸಂಸದ ಕ್ಯಾ.‌ಬ್ರಿಜೇಶ್ ಚೌಟ ರೈಲ್ವೆ ಸಚಿವಾಲಯದೊಂದಿಗೆ ಆದ್ಯತೆಯ ಮೇರೆಗೆ ಫಾಲೋ ಅಪ್ ಮಾಡಿದ ಕಾರಣ, ಈ ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆ ಈಡೇರುತ್ತಿದೆ ಎಂದು ಹೇಳಲಾಗುತ್ತಿದೆ. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ...
ಜಿಲ್ಲೆದಕ್ಷಿಣ ಕನ್ನಡಮೈಸೂರುಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್​! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು -ಕಹಳೆ ನ್ಯೂಸ್

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್​ನಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ನಿನ್ನೆ ಪ್ರಕಟಗೊಂಡ ಫಲಿತಾಂಶದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ, ಮನೆಯಲ್ಲಿ ಯಾರೊಬ್ಬರೂ ಇಲ್ಲದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಾಧಕ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನ-ಕಹಳೆ ನ್ಯೂಸ್

ಪುತ್ತೂರು :ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಹಲವಾರು ರಾಂಕ್‌ ಗಳನ್ನು ಬಾಚಿಕೊಳ್ಳುವುದರೊಂದಿಗೆ ಉತ್ತಮ ಸಾಧನೆಯನ್ನು ಮೆರೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನವನ್ನು ಮಾಡಲಾಯಿತು. ಕಾಲೇಜು ಆಡಳಿತಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಯನ್ನು ಸಲ್ಲಿಸುತ್ತಾ, ನಿರಂತರವಾದ ಶ್ರಮ, ಸಾಧನೆ ನಮ್ಮನ್ನು ಶಿಖರಕ್ಕೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರಿನಲ್ಲಿ ನಡೆಯುವ ಜನಾಕ್ರೋಶ ಬೃಹತ್ ಪ್ರತಿಭಟನೆಗೆ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಕಿಶೋರ್ ಕುಮಾರ್ ಬೋಟ್ಯಾಡಿ ಸುಳ್ಯ ಅರಂತೋಡಿನಲ್ಲಿ ಸ್ವಾಗತ-ಕಹಳೆ ನ್ಯೂಸ್

ಸುಳ್ಯ: ಅನಂತೋಡಿನಲ್ಲಿ ಸ್ವಾಗತಿಸಿದರು.ಭಾರತೀಯ ಜನತಾ ಪಾರ್ಟಿಯ ವತಿಯಿಂದ ಮಂಗಳೂರಿನಲ್ಲಿ ನಡೆಯುವ ಜನಾಕ್ರೋಶ ಬೃಹತ್ ಪ್ರತಿಭಟನೆಗೆ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಇವರನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ ನೇತೃತ್ವದಲ್ಲಿ ಪುತ್ತೂರು ಬಿಜೆಪಿ ಕಾರ್ಯಕರ್ತರು ಸುಳ್ಯ ಅರಂತೋಡಿನಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ ಪುತ್ತೂರು ಮಂಡಲದ ಸಂತೋಷ್ ಕುಮಾರ್ ರೈ ಕೈಕಾರ ಮಣಿಕಂಠ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೇ ಆರಂಭದಲ್ಲಿ ನವೀಕರಣ ಮಾಡದಿದ್ದಲ್ಲಿ ಹೋರಾಟ: ಶಾಸಕ ರಾಜೇಶ್‌ ನಾೖಕ್‌ ಎಚ್ಚರಿಕೆ-ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌ನ ದತ್ತು ಸ್ವೀಕಾರವನ್ನು ರಾಜ್ಯ ಸರಕಾರವು ನವೀಕರಣ ಮಾಡಿಲ್ಲ ಎಂದು ಆರೋಪಿಸಿ ಮಂಗಳವಾರ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಮಾತನಾಡಿ, ಹಳೆ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ವೇಳೆ ಆಗಿನ ಶಿಕ್ಷಣಾಧಿಕಾರಿಗಳ ಸಲಹೆಯಂತೆ ಟ್ರಸ್ಟ್‌ಗೆ ದತ್ತು ನೀಡಲಾಗಿದ್ದು, ಬಳಿಕ ಈ...
1 159 160 161 162 163 731
Page 161 of 731