ತಣ್ಣೀರುಬಾವಿ ಸುಲಿಗೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ -ಕಹಳೆ ನ್ಯೂಸ್
ಮಂಗಳೂರು : ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿ...







