ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ -ಕಹಳೆ ನ್ಯೂಸ್
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು, ಮನೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೌರವಾನ್ವಿತ ಶರತ್ ಕೃಷ್ಣ ಪಡ್ವೆಟ್ನಾಯರವರು ಹಸ್ತಾಂತರ ಮಾಡಿದರು. ವಾತ್ಸಲ್ಯ ಯೋಜನೆಯಂತಹ ಸಮಾಜವನ್ನು ಕಟ್ಟುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದು...







