Saturday, June 13, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದಲ್ಲಿ ನಿವೃತ್ತ ಯೋಧ ಹವಾಲ್ದಾರ್ ಲಕ್ಷ್ಮೀಶ್ ಅವರಿಗೆ ಸನ್ಮಾನ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹದಿನೆಂಟು ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆಗೈದು ಇದೀಗ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ವಿಶ್ರಾಂತ ಯೋಧ ಹವಾಲ್ದಾರ್ ಲಕ್ಷ್ಮೀಶ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹವಾಲ್ದಾರ್ ಲಕ್ಷ್ಮೀಶ್ ಅವರು ದೇಶದ ಜನತೆ ನೆಮ್ಮದಿಯಿಮದ ಬದುಕು ನಡೆಸುವಲ್ಲಿ ಮೈಯೆಲ್ಲಾ ಕಣ್ಣಾಗಿಸಿ, ಗಡಿಯನ್ನು ಕಾಯುವ ಯೋಧನ ಪರಿಶ್ರಮವಿದೆ. ಅಂತಹ ಯೋಧರನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋ ಸಾಗಾಟ ಪತ್ತೆ; ಸ್ಕೂಟರ್ ಬಿಟ್ಟು ಪರಾರಿಯಾದ ಆರೋಪಿ-ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಘಟನೆ ಕುಲಶೇಖರ, ಕೈಕಂಬ ಬಳಿ ಮಾ.15ರ ಶನಿವಾರ ನಡೆದಿದೆ. ಈ ಸಂದರ್ಭ ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾರೆ. ಸ್ಕೂಟರ್ ನಲ್ಲಿ 100 ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಭಜರಂಗದಳ ಕಾರ್ಯಕರ್ತರು ಸ್ಕೂಟರನ್ನು ತಡೆಯುತ್ತಿದ್ದಂತೆ ಸವಾರ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ್ ಕುಕ್ಕೆಗೆ ಭೇಟಿ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಮಾ.15ರ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ನಂತರ ದೇವಸ್ಥಾನದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರೀಯ ವೀರವನಿತೆ ಯಕ್ಷಗಾನ ನೃತ್ಯ ಕಲಾ ರತ್ನ ರಾಷ್ಟ್ರ ಪ್ರಶಸ್ತಿಗೆ ಶ್ರೀಮತಿ ಶೃತಿ ವಿಸ್ಮಿತ್ ಗೌಡ ಬಲ್ನಾಡು ಆಯ್ಕೆ-ಕಹಳೆ ನ್ಯೂಸ್

ಪುತ್ತೂರು:ಸಮಾಜ ಕಲ್ಯಾಣ ಸಂಸ್ಥೆ, ಬೆಂಗಳೂರು, ವಿಶ್ವಕನ್ನಡ ಜಾನಪದ ಪರಿಷತ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಮಹಿಳಾ ದಿನಾಚರಣೆ 2025 ನೇ ರಾಷ್ಟ್ರೀಯ ವೀರವನಿತೆ ಯಕ್ಷಗಾನ ನೃತ್ಯ ಕಲಾ ರತ್ನ ರಾಷ್ಟ್ರ ಪ್ರಶಸ್ತಿಗೆ ಶ್ರೀಮತಿ ಶೃತಿ ವಿಸ್ಮಿತ್ ಗೌಡ ಬಲ್ನಾಡು ಆಯ್ಕೆ ಆಗಿದ್ದಾರೆ. ಇವರಿಗೆ ಏಪ್ರೀಲ್ 6-4-2024 ರಂದು ಬೆಂಗಳೂರು ಅಕ್ಕ ಮಹಾದೇವಿ ಸಭಾಭವನದಲ್ಲಿ ಗಣ್ಯ ಮಾನ್ಯರ ಸಮ್ಮಖದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಗೌರವಿಸಲಾಗುವುದು....
ಅಂಕಣಉಡುಪಿಉತ್ತರಕನ್ನಡದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಮಧುರವಾದ ಕಂಠಸಿರಿಯಿಂದಲೇ ಗಮನ ಸೆಳೆದ ಯುವ ಮಹಿಳಾ ಭಾಗವತರು ಕುಮಾರಿ ಶ್ರೀರಕ್ಷಾ ಆರ್ ಹೆಗಡೆ – ಕಹಳೆ ನ್ಯೂಸ್

ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ ಭೂಷಣಗಳನ್ನು ಒಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯವಾದ ಕಲೆ ಎಂದರೆ ಅದು ಯಕ್ಷಗಾನ. ಅದೆಷ್ಟೋ ಯಕ್ಷಗಾನ ಕಲಾವಿದರು ತಮ್ಮ ಕುಟುಂಬದಲ್ಲಿ ಯಕ್ಷಗಾನ ಕಲಿತವರಿದ್ದರೆ ಅವರಿಂದ ಪ್ರೇರಣೆಗೊಂಡು ಯಕ್ಷಗಾನಕ್ಕೆ ಪಾದಾರ್ಪಣೆ ಮಾಡುತ್ತಾರೆ. ಆದ್ರೆ ಇಲ್ಲೊಬ್ಬರು ಮನೆಯಲ್ಲಿ ಕಲಾವಿದರಿಲ್ಲದಿದ್ದರೂ ತಾವೇ ಸ್ವತಃ ಆಸಕ್ತಿಯಿಂದ ಯಕ್ಷಗಾನ ರಂಗಕ್ಕೆ ಪ್ರವೇಶಿಸಿ ಹೆಸರು ಮಾಡಿದ್ದಾರೆ. ಅವರೇ ಬಡಗುತಿಟ್ಟಿನ ಯುವ ಮಹಿಳಾ ಭಾಗವತರು ಕುಮಾರಿ ಶ್ರೀ ರಕ್ಷಾ ರತ್ನವರ್ಮ ಹೆಗಡೆ. ಉತ್ತರ ಕನ್ನಡ ಜಿಲ್ಲೆ...
ಜಿಲ್ಲೆದಕ್ಷಿಣ ಕನ್ನಡದೆಹಲಿಸುದ್ದಿ

ಶಿರಾಡಿ ಘಾಟಿ ಸೇರಿ ಮಂಗಳೂರು-ಬೆಂಗಳೂರು ಕಾರಿಡಾರ್‌ ಯೋಜನೆ ಅನುಷ್ಠಾನ ಪ್ರಕ್ರಿಯೆ ಚುರುಕುಗೊಳಿಸಲು ಮನವಿʼ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರ್‌ ಅವರನ್ನು ಭೇಟಿಯಾಗಿ ಶಿರಾಡಿ ಘಾಟಿ ಬೈಪಾಸ್‌ ಯೋಜನೆ ಅನುಷ್ಠಾನ ಸೇರಿ ಬೆಂಗಳೂರು-ಮಂಗಳೂರು ಹೆದ್ದಾರಿ ಸಂಪರ್ಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ತಮ್ಮ ಈ ಭೇಟಿ ವೇಳೆ ಕ್ಯಾ. ಚೌಟ ಅವರು ಮಂಗಳೂರು-ಬೆಂಗಳೂರು ಹೆದ್ದಾರಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶಿಕ್ಷಕ ಕೃಷ್ಣ ಭಟ್ಟರಿಗೆ ಢಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆ-ಕಹಳೆ ನ್ಯೂಸ್

ಪುತ್ತೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾ. 6ರಂದು ನಿವೃತ್ತ ಶಿಕ್ಷಕ ಪಂಜ ಸಮೀಪದ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ಕೃಷ್ಣ ಭಟ್‌ (75) ಅವರಿಗೆ ಢಿಕ್ಕಿ ಹೊಡೆದು ಅವರ ಸಾವಿಗೆ ಕಾರಣವಾಗಿದ್ದು ವಾಹನವನ್ನು ಪೊಲೀಸರು ಗುರುತಿಸಿದ್ದಾರೆ. ಪೊಲೀಸರು ಸ್ಥಳೀಯ ಸಿಸಿ ಕೆಮರಾಗಳಲ್ಲಿನ ದೃಶ್ಯಗಳನ್ನು ಪರಿಶೀಲನೆ ಮಾಡಿದಾಗ ಕೆಮ್ಮಿಂಜೆ ಗ್ರಾಮದ ಕಾಪಿಕಾಡು ನಿವಾಸಿ ಮಹಮ್ಮದ್‌ ಫಯಾಜ್‌ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಢಿಕ್ಕಿ ಹೊಡೆದು ಪರಾರಿಯಾಗುತ್ತಿರುವ ದೃಶ್ಯ ದಾಖಲಾಗಿರುವುದು ಕಂಡುಬಂದಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಚಾಲನೆ: ಸಂಸದ ಚೌಟ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್‌ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಸಂಸದರು, ಒಂದು ದಶಕದ ಬೇಡಿಕೆ ಇದು ಎಂದು ವಿವರಿಸಿದ್ದಾರೆ. ಈ ರೈಲಿಗೆ ಹಸಿರು ನಿಶಾನೆ ತೋರುವ ಬಗ್ಗೆ ಸಚಿವ ಸೋಮಣ್ಣ ಅವರೊಂದಿಗೆ ಚರ್ಚಿಸಿದ್ದು, ಉದ್ಘಾಟನೆಗೆ ಸಮಯ ನಿಗದಿಯಾಗಲಿದೆ. ಬಳಿಕ...
1 186 187 188 189 190 740
Page 188 of 740