Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯ; ಶ್ರೀಮತಿ.ಪ್ರೇಮಾ.ಬಿ-ಕಹಳೆ ನ್ಯೂಸ್

ಪುತ್ತೂರು: ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಶಿಕ್ಷಣವು ಮಾನವನ ಜೀವನವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಅದರಂತೆಯೇ ಕ್ರೀಡೆಗಳೂ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಅಕ್ರಮ ಗೋ ಮಾಂಸ ಸಾಗಾಟ ತಡೆದ ಭಜರಂಗದಳ ಕಾರ್ಯಕರ್ತರು-ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ  ನಡೆದಿದೆ. ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ಭಜರಂಗದಳ ಕಾರ್ಯಕರ್ತರಿಗೆ ಸಿಕ್ಕಿದ್ದು ಅದರಂತೆ ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ ಕೂಡಲೇ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಇದಾದ ಬಳಿಕ ಸ್ಥಳಕ್ಕೆ ಬಂದ ಕದ್ರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಯುವಕನ ಶವ ಪತ್ತೆ-ಕಹಳೆ ನ್ಯೂಸ್

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಮೃತಪಟ್ಟ ವ್ಯಕ್ತಿ ಆಟೋ ಚಾಲಕ ಗಗನ್ ದೀಪ್ ಗೋಳಿತೋಟ್ಟು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 22 ವರ್ಷ 09 ತಿಂಗಳು ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ಇವರಿಗೆ ಸನ್ಮಾನ ಕಾರ್ಯಕ್ರಮ ಫೆ 11 ರಂದು ನಡೆಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫಿಕ್ ಮುಲ್ಲಾ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶ್ರಮದಾನದ ಮೂಲಕ ಮಜಿ, ವೀರಕಂಭ ಶಾಲೆಯಲ್ಲಿ ನೂತನ ಮೂತ್ರಾಲಯ ನಿರ್ಮಾಣಕ್ಕೆ ಚಾಲನೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದ ಅನುದಾನದಿಂದ ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶ್ರಮದಾನದ ಮೂಲಕ ನೂತನ ಮೂತ್ರಾಲಯ (ಯುರಿನಲ್ಸ್ ) ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್ ಸಿಂಗೇರಿ, ನಿಕಟಪೂರ್ವ ಅಧ್ಯಕ್ಷರಾದ ಸಂಜೀವ ಮೂಲ್ಯ ಮಜಿ, ಶಾಲಾಬಿವೃದ್ಧಿ ಸಮಿತಿಯ ಸದಸ್ಯರಾದ ಸುಧಾಕರ್ ವೀರಕಂಭ,...
ಜಿಲ್ಲೆದಕ್ಷಿಣ ಕನ್ನಡಸಿನಿಮಾಸುದ್ದಿಸುಬ್ರಹ್ಮಣ್ಯ

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11ರ ಮಂಗಳವಾರ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂದು (ಮಾ.11ರ ಮಂಗಳವಾರ) ಮತ್ತು ನಾಳೆ (ಮಾ.12ರ ಬುಧವಾರ) ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿರುವ ಬಾಲಿವುಡ್ ನ ಖ್ಯಾತ ನಟಿ ಕತ್ರೀನಾ ಕೈಫ್ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯ ಮೌಲ್ಯವನ್ನು ಗೌರವಿಸುವ ಸಮಾಜ ರಚನೆಯೇ ನಾರಾಯಣಗುರುಗಳ ಧ್ಯೇಯವಾಗಿತ್ತು : ಹರೀಶ್ ಎಸ್ ಕೋಟ್ಯಾನ್-ಕಹಳೆ ನ್ಯೂಸ್

ಬಂಟ್ವಾಳ : ಮಾನವೀಯ ಮೌಲ್ಯವನ್ನು ಗೌರವಿಸುವ ಸಮಾಜ ರಚನೆ ಹಾಗೂ ಸಮಾಜದ ಉದ್ಧಾರಕ್ಕಾಗಿ ಸೂಕ್ತ ಮಾರ್ಗದರ್ಶನ ನೀಡುವುದು ಮತ್ತು ವಿಶ್ವ ಕಲ್ಯಾಣವೇ ನಾರಾಯಣಗುರುಗಳ ಅಂತಿಮ ಗುರಿಯಾಗಿತ್ತು ಎಂದು ಬಂಟ್ವಾಳ ಯುವವಾಹಿನಿ ತಾಲೂಕು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಎಸ್ ಕೊಟ್ಯಾನ್ ತಿಳಿಸಿದರು. ಅವರು ಬಂಟ್ವಾಳ ಯುವವಾಹಿನಿ ಘಟಕದ ಸದಸ್ಯರಾದ ಶೈಲಜಾ ರಾಜೇಶ್ ರವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 36 ನೇ ಮಾಲಿಕೆಯಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಗೀತ ವಾದಕರಾದ ರಾಜೇಶ್ ಅಮ್ಟೂರು,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಸಿಗಾಳಿಯಿಂದ ರಕ್ಷಣೆ ಪಿಲಿಕುಳದ ಪ್ರಾಣಿ-ಪಕ್ಷಿಗಳಿಗೆ ಸ್ಪ್ರಿಂಕ್ಲರ್‌, ಗೂಡುಗಳಿಗೆ ಫ್ಯಾನ್‌-ಕಹಳೆ ನ್ಯೂಸ್

ಮಂಗಳೂರು: ಮಾರ್ಚ್‌ ತಿಂಗಳಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, “ಬಿಸಿಗಾಳಿ’ ಪರಿಣಾಮ ಪ್ರಾಣಿಗಳಿಗೂ ತಟ್ಟಿದೆ. ಅದರಲ್ಲೂ ಪಿಲಿಕುಳ ನಿಸರ್ಗಧಾಮದಲ್ಲಿ ಪ್ರಾಣಿ – ಪಕ್ಷಿಗಳು ಪರಿತಪಿಸುತ್ತಿವೆ. ಹೀಗಾಗಿ ನೀರಿನ ಸಿಂಚನದ ಮೂಲಕ ಬಿಸಿಲ ಝಳ ಪ್ರಾಣಿಗಳಿಗೆ ತಟ್ಟದಂತೆ ನೋಡಿಕೊಳ್ಳುವ ಕೆಲಸ ಮೃಗಾಲಯದ ಸಿಬಂದಿ ಮಾಡುತ್ತಿದ್ದಾರೆ. ಪಿಲಿಕುಳಕ್ಕೆ ಫಲ್ಗುಣಿ ನದಿಯ ಅದ್ಯಪಾಡಿ ಅಣೆಕಟ್ಟಿನಿಂದ ಶುದ್ಧೀಕರಿಸಿದ ನೀರು ಪೂರೈಕೆಯಾಗುತ್ತದೆ. ಗಿಡ – ಮರಗಳಿಗೆ ಪಾಲಿಕೆಯ ಪಚ್ಚನಾಡಿ ಎಸ್‌ಟಿಪಿಯಿಂದ ನೀರು ಪೂರೈಕೆ ವ್ಯವಸ್ಥೆ ಇದೆ. ಆದರೆ ಎಸ್‌...
1 188 189 190 191 192 740
Page 190 of 740