ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ವಿಜೃಂಭಣೆಯಿಂದ ಮಹಿಳಾ ದಿನಾಚರಣೆ-ಕಹಳೆ ನ್ಯೂಸ್
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್, ಪಾಂಡೇಶ್ವರದಲ್ಲಿ ಮಾರ್ಚ್ 8, 2025, ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಹಿಳಾ ಹಕ್ಕುಗಳು, ಸಮಾನತೆ ಮತ್ತು ಸಬಲೀಕರಣದ ಮಹತ್ವವನ್ನು ಒಳಗೊಂಡಂತೆ ಹಲವು ಸಂಸ್ಥೆಗಳ ಸಂಯುಕ್ತ ಸಹಭಾಗಿತ್ವದಲ್ಲಿ ಈ ವಿಶೇಷ ದಿನಾಚರಣೆ ಜರುಗಿತು. ಈ ಕಾರ್ಯಕ್ರಮವನ್ನು ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಇನ್ಸ್ಟಿಟ್ಯೂಟ್ ಆಫ್ ಪೋರ್ಟ್, ಶಿಪ್ಪಿಂಗ್ ಅಂಡ್ ಲಾಜಿಸ್ಟಿಕ್ ಮ್ಯಾನೇಜ್ಮೆಂಟ್, ಇನ್ಸ್ಟಿಟ್ಯೂಟ್ ಆಫ್ ಫಿಸಿಯೊಥೆರಪಿ, ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್...







