9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!-ಕಹಳೆ ನ್ಯೂಸ್
ಮಂಗಳೂರು ಸಮೀಪದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಾ .18 ರಂದು ನೀಡಲಾದ ದೂರಿನ ಮೇರೆಗೆ, ಆರೋಪಿಯು ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದೂ ತನಿಖೆಯಲ್ಲಿ...






