Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀರಾಮ ಗೆಳೆಯರ ಬಳಗ(ರಿ)ಪುತ್ತಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ : ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾಗಿ ಅವಿನಾಶ್ ಕೇದಗೆದಡಿ ನೇಮಕ – ಕಹಳೆ ನ್ಯೂಸ್

ಪುತ್ತೂರು: ಶ್ರೀರಾಮ ಗೆಳೆಯರ ಬಳಗ(ರಿ)ಪುತ್ತಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಇಂದು ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಪುತ್ತಿಲ ಕ್ರೀಡಾಂಗಣದಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾಗಿ ಅವಿನಾಶ್ ಕೇದಗೆದಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಪುತ್ತಿಲ, ಕೋಶಾಧಿಕಾರಿಯಾಗಿ ಹರೀಶ ಬಿಕೆ, ಸಂಚಾಲಕರಾಗಿ ಧನಂಜಯ ಕಲ್ಲಮ, ಸಂಘಟನಾ ಕಾರ್ಯದರ್ಶಿಯಾಗಿ ಚಂದ್ರಶೇಖರ ಕೇದಗೆದಡಿ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷರಾಗಿ ಪ್ರತೀಕ್ ಪುತ್ತಿಲ, ರಾಧಾಕೃಷ್ಣ ಪುತ್ತಿಲ, ರುಕ್ಮಯ್ಯ ಕೇದಗೆದಡಿ, ಶಿವಪ್ಪ ನಾಯ್ಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾಗ ಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ಇದರ ಹುಲಿಗಳು ಸಮಾಜದಲ್ಲಿರುವ ಕೆಟ್ಟದ್ದನ್ನು ವಿರೋಧಿಸಿ ಗರ್ಜಿಸುವ ಹುಲಿಗಳಾಗಬೇಕು… ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ –ಕಹಳೆ ನ್ಯೂಸ್

ಕಲ್ಲಡ್ಕ : ನಾಗ ಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ಇದರ ಹುಲಿಗಳು ಸಮಾಜದಲ್ಲಿರುವ ಕೆಟ್ಟದ್ದನ್ನು ವಿರೋಧಿಸಿ ಗರ್ಜಿಸುವ ಹುಲಿಗಳಾಗಬೇಕು, ಆ ಮೂಲಕ ಹಿಂದೂ ಧರ್ಮದ ಧರ್ಮ, ಸಂಸ್ಕೃತಿ, ಪರಂಪರೆ ಉಳಿಸುವ ಕಾರ್ಯ ಆಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ಗಣೇಶ್ ಇದರ ಸಹಕಾರದೊಂದಿಗೆ ನಾಗರಾಜ್ ಕಲ್ಲಡ್ಕ ನೇತೃತ್ವದ ನಾಗ ಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟಕ್ಕೆ ತೆರಳುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭಹಾರೈಕೆ- ಕಹಳೆ ನ್ಯೂಸ್

ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟವು ಅಕ್ಟೋಬರ್‌ 14ರಿಂದ 17ರ ವರೆಗೆ ಸರಸ್ವತಿ ಶಿಶುಮಂದಿರ, ಮುಖರ್ಜಿನಗರ, ದೇವಸ್‌,ಮಧ್ಯಪ್ರದೇಶ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ಅದ್ವಿತ್‌ ಶರ್ಮ, ದುರ್ಗೇಶ್‌ ಮೌರ್ಯ.ಎಚ್. ಎನ್‌, ಸೃಜನ್‌ ಡಿ. ಲಕ್ಕಪ್ಪನವರ್ ಹಾಗೂ ಪ್ರಥಮ ಪಿಯುಸಿಯ ಪ್ರಮಥ ಎಮ್‌ ಭಟ್‌, ರಾಮಪ್ರಸಾದ್‌ ಬಿ.ಎನ್‌ ಇವರು ಭಾಗಿಯಾಗಲಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ಸಂಪನ್ನಲಕ್ಷ್ಮಿ ಕೆ,...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುಸುದ್ದಿ

ಉಪ್ಪಿನಂಗಡಿ ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್:‌ ಚಾಲಕ ಮೃತ್ಯು – ಕಹಳೆ ನ್ಯೂಸ್

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಬಸ್‌ ಚಾಲಕರನ್ನು ಭರತ್‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್‌ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಬೆಳ್ತಂಗಡಿ ಯುವಕ ಅತ್ತಾಜೆ ಆದಿತ್ಯ ಭಟ್ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ, ಅ.12: ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿದ್ಯುಕ್ತವಾಗಿ ಉದ್ಘಾಟನೆಗೊಂಡ ಕುಡ್ಲದ ಪಿಲಿ ಪರ್ಬ 2024 – ಕಹಳೆ ನ್ಯೂಸ್

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅ.12 ಶಾರದಾ ಪೂಜೆ ಹಿನ್ನಲೆ : ಮನೆಯಲ್ಲಿ ಮಕ್ಕಳಿಂದ ಪುಸ್ತಕಗಳಿಗೆ ಪೂಜೆ ಮಾಡಿಸಿ ವೀಡಿಯೋ ಕಳುಹಿಸುವಂತೆ ದೇವಾಲಯಗಳ ಸಂವರ್ಧನಾ ಸಮಿತಿಯಿಂದ ವಿನಂತಿ  – ಕಹಳೆ ನ್ಯೂಸ್

ಕಳೆದೊಂದು ವಾರದಿಂದ ದೇಶದೆಲ್ಲೆಡೆ ಹಿಂದೂ ಆಸ್ತಿಕರು ನವರಾತ್ರಿ ಹಬ್ಬವನ್ನು ಭಕ್ತಿ ಮತ್ತು ಶ್ರದ್ದೆಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಇದೇ ಪಾವನ ಸಮಯದಲ್ಲಿ ಮುಂದಿನ ಪೀಳಿಗೆಯಾದ ಮಕ್ಕಳಲ್ಲಿ ಧರ್ಮ ಜಾಗೃತಿಯನ್ನು ಮೂಡಿಸಲು ಹಾಗೂ ಧರ್ಮ ರಕ್ಷಣೆಗೆ ಪ್ರೇರೆಪಿಸಲು ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗವು ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಶರನ್ನವರಾತ್ರಿಯ ಕೊನೆಯ ದಿನವಾದ ಅ.12ರಂದು ಬೆಳಿಗ್ಗೆ ಮಕ್ಕಳಲ್ಲಿ ಶಾರದಾ ಪೂಜೆ ಮಾಡಿಸುವಂತೆ ಪೋಷಕರಿಗೆ ಅದು ಕರೆ ನೀಡಿದೆ. ಅಂದು ಶಾರದಾ ಪೂಜೆಯ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ಮಾನಸಿಕ ಅಸ್ವಸ್ಥತೆಗೆ ಒಳಪಡುವವರನ್ನು ಎಲ್ಲರಂತೆ ಕಾಣಿರಿ. ಅವರ ಮೇಲೆ ದಯೆ ಮತ್ತು ಕರುಣೆ ಇರಲಿ. ಅವರನ್ನು ನಮ್ಮಂತೆ ಉಪಚರಿಸಿ, ನಿರ್ಲಕ್ಷ್ಯ ಮಾಡದಿರಿ ಎಂದು ಸಿವಿಲ್ ನ್ಯಾಯಾಧೀಶೆ ಮತ್ತು ದಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು...
1 294 295 296 297 298 739
Page 296 of 739