ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮುತ್ತಾಝ್ ಅಲಿ ಮೃತದೇಹ ಪತ್ತೆ – ಕಹಳೆ ನ್ಯೂಸ್
ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಇಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುತ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಲ್ತಾಝ್ ಅಲಿ...







