ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಅನುದಾನದ ನೂತನ ಶಾಲಾ ಕೊಠಡಿಗೆ ಶಿಲನ್ಯಾಸ -ಕಹಳೆ ನ್ಯೂಸ್
ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಅನುದಾನದಿಂದ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಶಿಲನ್ಯಾಸ ಕಾರ್ಯಕ್ರಮ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಶಿಲಾನ್ಯಾಸ ನೆರವೇರಿಸಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ಧನ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪಳನೀರು ಅನಂತ ತಂತ್ರಿಗಳ ಪೌರೋಹಿತ್ಯದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ತಾಲೂಕು...







