Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಇಂದಿನಿ0ದ ಪಾರ್ಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ವಾಹನಗಳಿಗೆ ದಂಡ ಕಡ್ಡಾಯ – ಕಹಳೆ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಜಾರಿಗೊಳಿಸಲಾಗಿರುವ ಹೊಸ ಸಂಚಾರ ಹಾಗೂ ಪಾರ್ಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ವಾಹನ ಇಂದಿನಿAದ ದಂಡ ವಿಧಿಸಲಾಗುತ್ತದೆ. ಸಂಚಾರ ನಿಯಮ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ಕೂಡ ಪೊಲೀಸರಿಗೆ / ಗೃಹರಕ್ಷಕರಿಗೆ ಮಾಹಿತಿ ನೀಡಬಹುದು. ಕಡ್ಡಾಯವಾಗಿ ಸಂಚಾರ, ಪಾರ್ಕಿಂಗ್ ನಿಯಮ ಪಾಲಿಸಿ, ಸುಗಮ ಸಂಚಾರಕ್ಕೆ ಸಹಕರಿಸುವಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪನಿರೀಕ್ಷಕರು ಮನವಿ ಮಾಡಿಕೊಂಡಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಪ್ರೌಡ ಶಾಲೆ ಸಾಲೆತ್ತೂರಿನಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ -ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ವಿಟ್ಲ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ, ಲಯನ್ಸ್ ಕ್ಲಬ್ ವಿಟ್ಲ. ಪ್ರಗತಿ ಬಂದು ಸ್ವಸಹಾಯ ಸಂಘ ಒಕ್ಕೂಟ ಸಾಲೆತ್ತೂರು, ಹಾಗೂ ಸರಕಾರಿ ಪ್ರೌಡ ಶಾಲೆ ಸಾಲೆತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸರಕಾರಿ ಪ್ರೌಡ ಶಾಲೆ ಸಾಲೆತ್ತೂರು ಇಲ್ಲಿ ನಡೆಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಸದಸ್ಯ ದೇವಿಪ್ರಸಾದ್ ಶೆಟ್ಟಿ...
ಕಾರ್ಕಳಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಸಂಸದ ಕ್ಯಾ. ಚೌಟ ಒತ್ತಾಯ– ಕಹಳೆ ನ್ಯೂಸ್

ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.  ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್,  ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದು, ಇಂತಹ ವಿಕೃತ ಕೃತ್ಯ ಖಂಡನೀಯ. ಈ ದುರುಳರ ಕೃತ್ಯದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದು, ಕರಾವಳಿಯಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎನ್ನುವುದಕ್ಕೆ  ಈ ಪ್ರಕರಣವೇ ಜ್ವಲಂತ ಸಾಕ್ಷಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.   ಕರಾವಳಿ ಭಾಗದಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದ್ದು, ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದೆ ಹಾಗೂ ಅದರಿಂದ ರಾಷ್ಟ್ರೀಯ ಭದ್ರತೆಗೆ ಆತಂಕ ಸೃಷ್ಟಿಸಿ ಕಾನೂನು ವ್ಯವಸ್ಥೆಯನ್ನು ಬುಡುಮೇಲು ಮಾಡುತ್ತಿರುವ ಬಗ್ಗೆ ಇತ್ತೀಚೆಗೆ ಸಂಸತ್ತಿನಲ್ಲಿಯೂ ಧ್ವನಿಯೆತ್ತಿದ್ದು, ಇದನ್ನು ಮಟ್ಟ ಹಾಕಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸದನದಲ್ಲಿ ಮನವಿ ಮಾಡಿದ್ದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.   ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂದಾಗಿದೆ. ಗೃಹ ಇಲಾಖೆ ಈ ಕೂಡಲೇ ಎಚ್ಚೆತ್ತುಕೊಂಡು ಕಾರ್ಕಳದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸುವುದಕ್ಕೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾಯ ಕೊಲೆ ಪ್ರಕರಣ ಭೇದಿಸಿದ ಪೋಲೀಸರು : ಆರೋಪಿಗಳಾದ ಅಳಿಯ ರಾಘವೇಂದ್ರ ಕೆದಿಲಾಯ, ಹಲವು ಪ್ರಕರಣದ ಆರೋಪಿ 20 ವರ್ಷದ ಮೊಮ್ಮಗ ಮುರಳಿಕೃಷ್ಣ ಅಂದರ್..!!! – ಕಹಳೆ ನ್ಯೂಸ್

ಬೆಳ್ತಂಗಡಿ : ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರನ್ನು ಯಾರು ಕೊಲೆ ಮಾಡಿದ್ದಾರೆ ಅನ್ನೋದು ಬಹುತೇಕರಿಗೆ ಯಕ್ಷ ಪ್ರಶ್ನೆಯಾಗಿ ಕಾಡಿತ್ತು. ತನಿಖೆಗಿಳಿದ ಪೊಲೀಸರಿಗೆ ಆರಂಭದಲ್ಲೇ ಪರಿಚಯಸ್ಥರೇ ಕೊಲೆ ಮಾಡಿದ್ದಾರೆ ಅನ್ನೋ ಸುಳಿವು ಸಿಕ್ಕಿತ್ತು. ಇದೀಗ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರು ತಮ್ಮ ಮಗಳಿಗೆ ಆಸ್ತಿ ನೀಡದ ಕೋಪಕ್ಕೆ ಮಗಳ ಗಂಡ ಹಾಗೂ ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ ಮಾಡಿರುವ ಭಯಾನಕ ಸತ್ಯ ಬಯಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ- ಕಹಳೆ ನ್ಯೂಸ್

ಕರ್ನಾಟಕ ಪಬ್ಲಿಕ್‌ ಪಿ.ಯು ಕಾಲೇಜು, ಹಾಸನ ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಆದ್ಯಾ ಬಿ.ಆರ್‌, ವರ್ಷ.ಕೆ, ಯಜ್ಞಾ, ವೀಕ್ಷಾ ಪಿ, ಶ್ರಾವ್ಯಾ ಯು, ಗ್ರೀಷ್ಮಾ ಎಸ್. ಎ, ತ್ರಿಶಾಲಿ ಕೆ.ಆರ್‌, ರಕ್ಷಾ ಎ.ಎಲ್ ಹಾಗೂ ದ್ವಿತೀಯ ಪಿಯುಸಿಯ ಕಾರ್ತಿಕಾ, ಧನುಶ್ರೀ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಶಾರದಾ ಯುವಕ ಮಂಡಲ (ರಿ) ಶಾರದಾ ನಗರ, ಸಜೀಪಮುನ್ನೂರು ಇದರ ವತಿಯಿಂದ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಶಾರದಾ ಯುವಕ ಮಂಡಲ (ರಿ) ಶಾರದಾ ನಗರ, ಸಜೀಪಮುನ್ನೂರು ಇದರ ವತಿಯಿಂದ ವರ್ಷ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆ26 ರಿಂದ ಆ28 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಯುವಕ ಮಂಡಲದ ಆಧ್ಯಕ್ಷ ಪರಮೇಶ್ವರ ಶಾರದಾ ನಗರ ಅವರು ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 1975 ರಲ್ಲಿ ಸದಾನಂದ ಪೂಜಾರಿ ಹಾಗೂ ಗೆಳೆಯರೊಂದಿಗೆ ಸೇರಿಕೊಂಡು ಶಾರದಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘ ವತಿಯಿಂದ ನಡೆದ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘ ಪ್ರಾಯೋಜಿತ ಓಣಂ ಆಚರಣೆಯು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಸಾಂಸ್ಕೃತಿಕ ಸಾಮರಸ್ಯ ಸಾರುವ ಈ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ವಿಶೇಷ ಉಡುಪುಗಳನ್ನು (ಸೀರೆ) ಧರಿಸಿ ಪೂಕಳಂ ರಚಿಸಿದರು. ವಿದ್ಯಾರ್ಥಿಗಳಿಗಾಗಿ ಪೂಕಳ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳ ತಂಡದಿAದ ಚೆಂಡೆ ಹಾಗೂ ವಿದ್ಯಾರ್ಥಿನಿಯರ ತಂಡಗಳಿAದ ತಿರುವಾದಿರ ಕಳಿ ಪ್ರದರ್ಶನಗಳು ನಡೆದವು. ವಿದ್ಯಾರ್ಥಿನಿ ಕು. ಸ್ವಾತಿಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿ, ಕು. ಪುನೀತಾ ಸ್ವಾಗತಿಸಿ,...
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ ಮತ್ತು ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ದೀಕ್ಷೆ ಪಡೆದು ಭಾಗವತಿಕೆ ಮಾಡಿದರೆ ಯಕ್ಷಗಾನ ಮುಂದುವರಿಯುತ್ತದೆ. ಆದರೆ ಪ್ರೇಕ್ಷಕರಿಗೆ ಯಕ್ಷಗಾನದ ಭಾವಗಳೆಲ್ಲವನ್ನೂ ಅರ್ಥ ಮಾಡಿಕೊಂಡು ಯಕ್ಷಗಾನ ನೋಡುವುದು ಹೇಗೆ ಎಂದು ತಿಳಿಸಿ ಕೊಡುವುದಕ್ಕೆ ಒಂದು ಪ್ರತ್ಯೇಕ ಕಮ್ಮಟ ನಡೆಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಯಕ್ಷಗಾನದ ಅಲೆ ಹಬ್ಬುವುದಕ್ಕೆ ಮಹಿಳಾ ಹಾಗೂ ಮಕ್ಕಳ ತಂಡ ಮುಖ್ಯ ಪಾತ್ರ ವಹಿಸಿದ್ದಾರೆ. ಯಾವುದೇ ಕಲೆಯು ನಮ್ಮ ಬದುಕಿನ ಅಂಗವಾಗಿ ಬಂದಾಗ ಅದುವೇ ನಮ್ಮ ಬದುಕನ್ನು ಉತ್ತಮವಾಗಿ ರೂಪಿಸುತ್ತದೆ. ಕನ್ನಡ ಭಾಷೆಯ ಉಳಿವಿಗೆ...
1 335 336 337 338 339 739
Page 337 of 739