Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಮಟ್ಟದ ಪ್ರತಿಭಾ ಕಾರಂಜಿ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಗಣಿತ – ವಿಜ್ಞಾನ ಮೇಳ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಚಿತ್ರಕಲೆ ಸ್ಪರ್ಧೆ, ಕ್ಲೇ ಮಾಡಲಿಂಗ್, ವಿಜ್ಞಾನ - ಗಣಿತ ಮಾದರಿ, ಪ್ರಯೋಗಗಳು, ರಸಪ್ರಶ್ನೆ, ಪ್ರಬಂಧ, ಛದ್ಮವೇಶ ಸ್ಪರ್ಧೆ, ಭಾಷಾ ಕಂಠಪಾಠ, ಆಶುಭಾಷಣ, ಪತ್ರವಾಚನ ಇತ್ಯಾದಿ ಸ್ಪರ್ಧೆಗಳನ್ನು ಹಿರಿಯ ಹಾಗೂ ಕಿರಿಯ ವಿಭಾಗಗಳಿಗೆ ಹಮ್ಮಿಕೊಳ್ಳಲಾಯಿತು. ಎಲ್ಲಾ ವಿದ್ಯಾರ್ಥಿಗಳು ಕನಿಷ್ಟ ಒಂದು ಸ್ಪರ್ಧೆಯಲ್ಲಾದರೂ ಭಾಗವಹಿಸಿದರು. ತೀರ್ಪುಗಾರರಾಗಿ ಶ್ರೀರಾಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ನಿಯತಿ ಭಟ್ ದ್ವಿತೀಯ – ಕಹಳೆ ನ್ಯೂಸ್

ಪುತ್ತೂರು: ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ನಿಯತಿ ಭಟ್ ಇವರು ಆಗಸ್ಟ್ 2ರಂದು ಕುಂದಾಪುರ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜುಲೈ 30 ರಂದು ಕಡಬದ, ಪಂಜ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ರಿಧಮಿಕ್ ಯೋಗಾಸನ 17 ವಯೋಮಿತಿ ಒಳಗಿನ( ಕಿಶೋರ ವರ್ಗ)ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : “ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ” : ಕಾವು ಹೇಮನಾಥ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ(ಸಿಬಿಎಸ್‌ಇ) ಪುತ್ತೂರು ಹಾಗೂ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಇದರ ಸಹಯೋಗದಲ್ಲಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಗರದ ಸಾಮೆತ್ತಡ್ಕ ಸುದಾನ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಿತು. ಶ್ರೀ ರಾಮಕೃಷ್ಣ ಪ್ರೌಢ ಶಾಲೆ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಕ್ರೀಡಾಕೂಟವು ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು. ಮುಖ್ಯ ಅತಿಥಿ ವಿದ್ಯಾಭಾರತಿ ಕರ್ನಾಟಕದ ಜಿಲ್ಲಾಧ್ಯಕ್ಷ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿ ವಿದ್ಯಾಲಯದಲ್ಲಿ ಸಿಇಟಿ ಕೋಚಿಂಗ್ ತರಗತಿ ಉದ್ಘಾಟನೆ : ಸಮಯದ ಸುದುಪಯೋಗದಿಂದ ಉಜ್ವಲ ಭವಿಷ್ಯ: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ – ಕಹಳೆ ನ್ಯೂಸ್

ಪುತ್ತೂರು: ಸಿಇಟಿ ಸಂಬಂಧಿತ ಪಠ್ಯಕ್ರಮವು NATA, NDA, NEET, CET ಮುಂತಾದ ಎಲ್ಲಾ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಅಷ್ಟೇ ಅಲ್ಲದೆ ಬಿಎಸ್ಸಿಗೂ ಪೂರಕವಾದ ತಳಪಾಯವನ್ನು ಒದಗಿಸುತ್ತದೆ. ಆದುದರಿಂದ ಈ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಗಂಭೀರವಾಗಿ ಪರಿಗಣಿಸಿ ನಿಯಮಿತವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರು ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಆಯೋಜಿಸಿರುವ ಜಿಲ್ಲಾ ಶೈಕ್ಷಣಿಕ ಸಹಮಿಲನವು ಶ್ರೀರಾಮ ವಿದ್ಯಾಕೇಂದ್ರದ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆಯಿತು. ಶಕ್ತಿ ವಿದ್ಯಾಲಯ ಮಂಗಳೂರಿನ ಅಧ್ಯಕ್ಷರಾದ ಶ್ರೀ ಕೆ.ಸಿ.ನಾಯಕ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮದ ಬಗ್ಗೆ ಮಾತನಾಡಿ ಸಾಮರಸ್ಯದ ರಾಷ್ಟç ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಹಾಗೂ ಮಕ್ಕಳಲ್ಲಿ ಮಾತೃಭೂಮಿಯ ಕಲ್ಪನೆಯನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಗ್ಗ ವಲಯದ ಶೌರ್ಯ ಘಟಕ ವತಿಯಿಂದ ತೀರಾ ನಿರ್ಗತಿಕ ಮೂರು ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ಟನ್ನು ವಿತರಣೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ಘಟಕ ವತಿಯಿಂದ ಸಮಾಜದಲ್ಲಿ ತೀರಾ ನಿರ್ಗತಿಕ ಮೂರು ಕುಟುಂಬಗಳನ್ನು ಗುರುತಿಸಿ ಆಹಾರ ಸಾಮಗ್ರಿಗಳ ಕಿಟ್ಟನ್ನು ವಿತರಿಸಲಾಯಿತು. ಸಂದರ್ಭದಲ್ಲಿ ಯೋಚನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ, ವಗ್ಗ ವಲಯದ ಮೇಲ್ವಿಚಾರಕರಾಕಿ ಸವಿತಾ, ಶೌರ್ಯ ಘಟಕದ ಸಂಯೋಜಕಿ ರೇಖಾ ಪಿ, ಘಟಕ ಪ್ರತಿನಿಧಿ ಪ್ರವೀಣ್, ಸಂಪತ್ ಶೆಟ್ಟಿ, ಮಹಾಬಲ ರೈ, ನಾರಾಯಣಶೆಟ್ಟಿ, ಆನಂದ,...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ  ಕೆ.ವಿ.ಜಿ ಪುಣ್ಯಸ್ಮರಣೆ – ಕಹಳೆ ನ್ಯೂಸ್

ಶಿಕ್ಷಣ ಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ...
ದಕ್ಷಿಣ ಕನ್ನಡಸುದ್ದಿ

ದೆಹಲಿಯಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಮಾನ್ಯ ಸಚಿವರನ್ನು ಈ ಸಂದರ್ಭದಲ್ಲಿ ಸಂಸದರು ಆಹ್ವಾನಿಸಿದರು ಹಾಗೂ ಮಂಗಳೂರಿನ KIOCL ಸ್ಥಾವರಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು NMDC ಯೊಂದಿಗೆ ಅದರ ವಿಲೀನದ ಸಾಧ್ಯತೆಗಳ ಕುರಿತು ಚರ್ಚಿಸಿದರು. ಬಂದರಿನ ಸಮೀಪದಲ್ಲಿರುವ ಕಾರಣಕ್ಕೆ ಕೆಐಓಸಿಎಲ್ ನ ಬೆಳವಣಿಗೆಯ ಸಾಮರ್ಥ್ಯವನ್ನು ಪರಿಗಣಿಸಿ, ಕೆಐಓಸಿಎಲ್ ಮಂಗಳೂರು ಸ್ಥಾವರದಲ್ಲಿ ಪೂರ್ಣ ಪ್ರಮಾಣದ ಕಾರ್ಯಚಟುವಟಿಕೆಗಳನ್ನು ಪುನರಾರಂಭಿಸಲು ಆಯ್ಕೆಗಳನ್ನು ಕಂಡುಕೊಳ್ಳುವಂತೆ ವಿನಂತಿಸುವುದರ ಜೊತೆಗೆ ಉದ್ಯೋಗ ಸೃಷ್ಟಿ ಮತ್ತು ಪ್ರಸ್ತುತ ಉದ್ಯೋಗಿಗಳ ಸುರಕ್ಷತೆಯ...
1 345 346 347 348 349 739
Page 347 of 739