Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ : ಬೆಂಗಳೂರು- ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್ – ಕಹಳೆ ನ್ಯೂಸ್

ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು- ಮಂಗಳೂರು ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ಮಂಗಳೂರು –ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಸಕಲೇಶಪುರ ದೊಡ್ಡ ತೊಪ್ಲು ಎಂಬಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಕಾರು ,ಲಾರಿ,ಗ್ಯಾಸ್ ಟ್ಯಾಂಕರ್ ಸಿಲುಕಿಕೊಂಡಿದೆ. ಈ ಹೆದ್ದಾರಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ಗುಡ್ಡ ಕುಸಿತವಾಗುತ್ತಿದೆ....
ದಕ್ಷಿಣ ಕನ್ನಡಮಂಗಳೂರು

ಮಂಗಳೂರು :ಶ್ರೀ ಭುವನೇಂದ್ರ ಹಾಲ್‌ನಲ್ಲಿ ಕೆನರಾ ನಂದಗೋಕುಲ್ ಹುಲಿಯ ದಿನಾಚರಣೆ : ಹುಲಿವೇಷ ಧರಿಸಿ ಗಮನ ಸೆಳೆದ ಮಕ್ಕಳು -ಕಹಳೆ ನ್ಯೂಸ್

ಮಂಗಳೂರು : ಕೆನರಾ ನಂದಗೋಕುಲ್ ತಂಡವು ಶ್ರೀ ಭುವನೇಂದ್ರ ಸಭಾಭವನದಲ್ಲಿ ಹುಲಿಯ ದಿನವನ್ನು ವಿಜೃಂಭಣೆಯಿಂದ ಆಚರಿಸಿತು. ಮಕ್ಕಳು ಹುಲಿವೇಷ ಧರಿಸಿ ಎಲ್ಲರ ಗಮನ ಸೆಳೆದರು. ಕೆಲವು ಮಕ್ಕಳು ಹುಲಿಗಳ ಬಗ್ಗೆ ಭಾವನಾತ್ಮಕ ಭಾಷಣಗಳನ್ನು ನೀಡಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ "ಹುಲಿಗಳನ್ನು ರಕ್ಷಿಸಿ, ಪ್ರಕೃತಿಯನ್ನು ಉಳಿಸಿ" ಎಂಬ ಘೋಷಣೆ ಕೇಳಿಬಂತು. ಪುಣ್ಯಕೋಟಿ ಎಂಬ ಪ್ರಸಿದ್ಧ ನಾಟಕವನ್ನು ಮಕ್ಕಳು ಅಭಿನಯ ಮಾಡಿ, ಪ್ರೇಕ್ಷಕರಿಗೆ ಮನರಂಜನೆ ಜೊತೆಗೆ ನೈತಿಕ ಪಾಠವನ್ನೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ : ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನೇತ್ರಾವತಿ-ಕಹಳೆ ನ್ಯೂಸ್

ಕಳೆದ ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಮಲೆನಾಡು ಪ್ರದೇಶದಲ್ಲಿಯೂ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ ‌7.9ಮೀ ಗೆ ತಲುಪಿದೆ. ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ. ತಹಶಿಲ್ದಾರ್ ಅರ್ಚನಾ ಭಟ್ ಏನು ಹೇಳಿದ್ದಾರೆ. ಬಂಟ್ವಾಳ ಟೌನ್ ಲಿಮಿಟ್ಸ್ ಅಲ್ಲಿ ನದಿ ನೀರು ಏರಿಕೆಯಾಗಿದ್ದು, ರಸ್ತೆಗೆ ನದಿ ನೀರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ| ಹೆಚ್ ಸೆಲ್ವಕುಮಾರ್ : ಮಳೆಯಿಂದ ಹಾನಿಯಾದ ಸ್ಥಳಗಳಿಗೆ ಭೇಟಿ -ಕಹಳೆ ನ್ಯೂಸ್

ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ| ಹೆಚ್ ಸೆಲ್ವಕುಮಾರ್ ಅವರು ದ.ಕ.ಜಿಲ್ಲೆಗೆ ಆಗಮಿಸಿ ಮಳೆಯಿಂದ ಹಾನಿಯಾದ ಸ್ಥಳಗಳಿಗೆ ನೀಡಿದರು ,ಹಾಗೂ ಪಿ.ಡಬ್ಲ್ಯೂ ಡಿಗೆ ಸಂಬಂಧ ಪಟ್ಟ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು, ಮಂಗಳೂರು ತಾಲೂಕಿನ ಕೆತ್ತಿ ಕಲ್ಲು ಗುಡ್ಡ, ಬಂಟ್ವಾಳ ತಾಲೂಕು ಕಲ್ಲಡ್ಕ ಮಾಣಿ, ಉಪ್ಪಿನಂಗಡಿ, ಮೂಲಕ ಗುಂಡ್ಯ, ಶಿರಡಿ ಮತ್ತು ಸಕಲೇಶಪುರ ತಾಲೂಕಿನ ರಾಷ್ಟೀಯ ಹೆದ್ದಾರಿಯಲ್ಲಿ ಹಾನಿಯಾದ ಸ್ಥಳ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾಧಿಕಾರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆ ಮನೆ ಗಮಕ ಸರಣಿಯ ಅಂಗವಾಗಿ ಪ್ರೊ. ರಾಜಮಣಿ ರಾಮಕುಂಜ ಅವರ ಮನೆ ‘ಶಮ್ಯಾಪ್ರಾಸ’ದಲ್ಲಿ ನಡೆದ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ-ಕಹಳೆ ನ್ಯೂಸ್

ಸರಿದಂತರ ಪ್ರಕಾಶನ, ಮೊಡಂಕಾಪು ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಬಂಟ್ವಾಳ ಹಾಗೂ ಹಿರಿಯರ ಸೇವಾ ಪ್ರತಿಷ್ಠಾನ(ರಿ), ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಮನೆ ಮನೆ ಗಮಕ ಸರಣಿಯ ಅಂಗವಾಗಿ, ಪ್ರೊ. ರಾಜಮಣಿ ರಾಮಕುಂಜ ಅವರ ಮನೆ 'ಶಮ್ಯಾಪ್ರಾಸ'ದಲ್ಲಿ ಜು.27ರಂದು ಸಂಜೆ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು. ಗಮಕಿ ಮಂಜುಳಾ ಸುಬ್ರಹ್ಮಣ್ಯ ಗಮಕ ವಾಚನ ಮಾಡಿ, ಪ್ರೊ. ರಾಜಮಣಿ ರಾಮಕುಂಜ ವ್ಯಾಖ್ಯಾನಿಸಿದರು. ಶಾಲಾ ವಿದ್ಯಾರ್ಥಿಗಳು ಬಸಪ್ಪ ಶಾಸ್ತ್ರಿಗಳ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 'ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇರೆ ಮೀರಿರುವ ಮಾದಕದ್ರವ್ಯ ವ್ಯಸನೆ ಮತ್ತು ಮಾರಾಟದ ಚಟುವಟಿಗೆಗಳ' ಕುರಿತು ಸದನದ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. "ಪ್ರತಿ ತಿಂಗಳ ಮಾಧ್ಯಮಗಳ ಹೆಡ್‌ಲೈನ್‌ಗಳನ್ನು ಗಮನಸಿದರೆ ನಗರದಲ್ಲಿ ಡ್ರಗ್ಸ್‌ನ ಅತಿರೇಕದ ಚಟುವಟಿಕೆಗಳನ್ನು ಸ್ಪಷ್ಟವಾಗಿ ಗಮನಿಸಬಹುದು. ಮಂಗಳೂರು ನಗರವು ವಿವಿಧ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು :ಮನೆಯ ಹತ್ತಿರದ ತೋಟದ ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಮೃತ್ಯು – ಕಹಳೆ ನ್ಯೂಸ್

ಪುತ್ತೂರು : ತನ್ನ ಮನೆಯ ಹತ್ತಿರದ ತೋಟದ ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಅಗರ್ತಬೈಲಿನ ಬುಳ್ಳೇರಿಕಟ್ಟೆ ಎಂಬಲ್ಲಿ ನಡೆದಿದೆ. ಮೃತವ್ಯಕ್ತಿಯನ್ನು ಜಗನ್ ಮೋಹನ್ ರೈ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳ ಹಾಗೂ ಕೃಪಾನ್ ಅಟ್ಲಾರ್, ಆನಂದ್ ಅವರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಿ, ಮೃತದೇಹವನ್ನು ಕೆರೆಯಿಂದ ಮೆಲಕ್ಕೆತ್ತಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ – ಕಹಳೆ ನ್ಯೂಸ್

ಪುತ್ತೂರು : ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಸ್ಥಳೀಯ ಉದ್ಯಮಿ, ಆರೋಪಿ ಅಬ್ದುಲ್ ರಹಿಮಾನ್ ಜುಲೈ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಸ್ನಾನ ಮಾಡುತ್ತಿದ್ದ 22 ವರ್ಷದ ಮಹಿಳೆಯನ್ನು ಇಣುಕಿ ನೋಡಿದ್ದಾನೆ. ಈ ವೇಳೆ ಆತ ಸಿಕ್ಕಿಬಿದ್ದಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿ...
1 351 352 353 354 355 739
Page 353 of 739