Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರ- ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಸಂಸ್ಥೆಯು ಪರಿವರ್ತನೆಯ ದಾರಿದೀಪವಾಗಿದೆ, ಸದಾ ಹೊಸತನದ ಮೂಲಕ ಎಲ್ಲರನ್ನೂ ಆಕರ್ಷಿಸುವ ಯುವವಾಹಿನಿ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್ ತಿಳಿಸಿದರು. ಅವರು ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ತರಬೇತುದಾರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಸರ್ವೆ ಸೇತುವೆ ಸಮೀಪ ವಾಹನ ನಿಲ್ಲಿಸಿ ಯುವಕ ನಾಪತ್ತೆ ಪ್ರಕರಣ : ಮೃತದೇಹ ಪತ್ತೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುತ್ತಿದ್ದ ಗೌರಿ ಹೊಳೆಯ ಅನತಿ ದೂರದಲ್ಲಿ ಬೈಕ್‌ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಮುಕ್ರಂಪಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ, ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡರವರ ಪುತ್ರ ಸನ್ಮಿತ್ (21) ಮೃತಪಟ್ಟವರು. ಇವರು ಜುಲೇ 19ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಬಳಿಕ ತಡ ರಾತ್ರಿ ಹುಡುಕಾಟ ನಡೆಸಿದಾಗ, ಗೌರಿ ಹೊಳೆ ಸೇತುವೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜು.22ರಂದು ಕಾರ್ಗಿಲ್ ವಿಜಯ – ಯೋಧ ನಮನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿ 25 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ - ಯೋಧ ನಮನ ಕಾರ್ಯಕ್ರಮವು ಜು. 22ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಗಿಲ್ ಯುದ್ಧದಲ್ಲಿ ಭಾರತದ ಸಶಸ್ತ್ರ ಪಡೆಗಳ ವೀರಗಾಥೆಯನ್ನು ಸ್ಮರಿಸುತ್ತಾ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರಯೋಧರಿಗೆ ಈ ಸಂದರ್ಭದಲ್ಲಿ ನಮನ ಸಲ್ಲಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ(ರಿ.) ಮಾಣಿ ಘಟಕದ ವತಿಯಿಂದ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಯುವವಾಹಿನಿ(ರಿ.) ಮಾಣಿ ಘಟಕದ ವತಿಯಿಂದ "ಆಟಿದ ನೆಂಪು" ವಿಶೇಷ ಕಾರ್ಯಕ್ರಮವು ದಿನಾಂಕ 21-07-2024 ನೇ ರವಿವಾರ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಮಾಣಿ ಇಲ್ಲಿ ವಿವಿಧ ಸ್ಪರ್ಧೆ ಹಾಗೂ ಸಭಾಕಾರ್ಯಕ್ರಮದೊಂದಿಗೆ ಜರುಗಲಿದೆ. ಬೆಳಿಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ವಿವಿಧ ಸ್ಪರ್ಧೆ ನಡೆಯಲಿದೆ,ತದನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು,ಆಟಿ ತಿಂಗಳ ವಿಶೇಷತೆಯನ್ನು ಬಿಂಬಿಸುವ ವಿವಿಧ ಆಟಿಯ ತಿನಿಸುಗಳು ಇರಲಿದೆ. ಎಂದು ಮಾಣಿ ಘಟಕದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂಟ್ವಳ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಸದಸ್ಯರಿಗೆ ಅಧ್ಯಯನ ಪ್ರವಾಸ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಳ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಸದಸ್ಯರಿಗೆ ಅಧ್ಯಯನ ಪ್ರವಾಸ ಹಮ್ಮಿ ಕೊಳ್ಳಲಾಯಿತು. ವಿವಿಧ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದ ಮಿಯಾಪಾದೆ ಸೌಮ್ಯ ರವರ ಮಲ್ಲಿಗೆ ನಾಟಿ,,ಬೊಳ್ಳುರು ಸತೀಶ್ ರವರ ಹೈನುಗಾರಿಕೆ ಹಾಗೂ ಓಲೆ ಬೆಲ್ಲ ತಯಾರಿ, ವಾಸು ನಾಯ್ಕರವರ ತಿಂಡಿ ಘಟಕ, ಅಲ್ಲಿಪಾದೆ ರಘು ಪೂಜಾರಿ ಯವರ ಜನನಿ ಪ್ರೊಡಕ್ಟ್, ನಾವುರ ಜಲಜಾಕ್ಷಿ ಯವರ ಬ್ಯಾಗ್ ತಯಾರಿ, ನಾವುರ ಹೇಮಲತಾ ರವರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಸರ್ವೆ ಗೌರಿ ಸೇತುವೆ ಬಳಿ ದ್ವಿಚಕ್ರ ವಾಹನ ಪತ್ತೆ : ಯುವಕ ನದಿಗೆ ಹಾರಿರುವ ಶಂಕೆ: ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಪುತ್ತೂರು: ಕುದ್ಮಾರು ಗ್ರಾಮದ ಯುವಕನೊಬ್ಬ ಕಾಣೆಯಾಗಿದ್ದು, ಸರ್ವೆ ಗೌರಿ ಸೇತುವೆ ಸಮೀಪ ಆತನ ದ್ವಿಚಕ್ರ ವಾಹನ ಪತ್ತೆಯಾಗಿದೆ. ಯುವಕ ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಎಲ್ಲಿಗಾದರೂ ಹೋಗಿದ್ದಾನೆಯೇ ಎನ್ನುವ ಸಂಶಯವೂ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿದ್ದಾರೆ. ಪೆÇಲೀಸರು ನಿನ್ನೆ ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಸದರ ಮನವಿ ಸ್ಪಂದಿಸಿದ ರೈಲ್ವೇ ಇಲಾಖೆ : ಇಂದಿನಿಂದ ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ ಆರಂಭ – ಕಹಳೆ ನ್ಯೂಸ್

ಮಂಗಳೂರು : ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟಿ ಸೇರಿದಂತೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‍ಎಂ ಅವರಿಗೆ ಪತ್ರ ಬರೆದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜು.20ರಂದು (ನಾಳೆ) ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಬಲ್ನಾಡು ಇದರ ನೂತನ ಕೇಂದ್ರ ಕಛೇರಿ ಕಟ್ಟಡ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು : ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಬಲ್ನಾಡು ಇದರ ನೂತನ ಕೇಂದ್ರ ಕಛೇರಿ ಕಟ್ಟಡದ ಉದ್ಘಾಟನಾ ಸಮಾರಂಭವು ಜು.20ರಂದು ನಡೆಯಲಿದೆ. ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಅಧ್ಯಕ್ಷ ವಿ. ಸತೀಶ್ ಗೌಡ ಒಳಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯ...
1 356 357 358 359 360 739
Page 358 of 739