Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಳ್ಳಾಲ : ಭಾರಿ ಮಳೆಗೆ ಮನೆ ಮೇಲೆ ಕಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ಮೃತ್ಯು : ಮಡಿದವರ ಆತ್ಮಕ್ಕೆ ಸದ್ದತಿ ಕೋರಿದ ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಉಳ್ಳಾಲ : ಕುತ್ತಾರಿನಲ್ಲಿ ಇಂದು ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ. ಈ ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಸದ್ದತಿಯನ್ನು ಕೋರುತ್ತೇನೆ. ನಾನು ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕಾರಣ ಕುತ್ತಾರಿನ ಘಟನೆಯ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ತುರ್ತು ಸ್ಪಂದಿಸುವಂತೆ ತಿಳಿಸಿದ್ದು, ದೆಹಲಿಯಿಂದ ಆಗಮಿಸಿದ ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲೆಯ ಜನರು ವಿಶೇಷವಾಗಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಕಂಪೌಂಡ್ ಕುಸಿದು ನಾಲ್ವರು ಮೃತಪಟ್ಟ ಪ್ರಕರಣ: ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ – ಕಹಳೆ ನ್ಯೂಸ್

ಮಂಗಳೂರು: ನಗರದ ಹೊರ ವಲಯದ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ಇಂದು ಮುಂಜಾನೆ ಒಂದೇ ಕುಟುಂಬದ ನಾಲ್ವರು ಗೋಡೆ ಕುಸಿದು ಸಾವನ್ನಪ್ಪಿದ್ದು, ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಯುಟಿ ಖಾದರ್ ಅವರು ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದಷ್ಟು ಬೇಗ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ-ಕಹಳೆ ನ್ಯೂಸ್

ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ದೊರೆತಿಲ್ಲ. ಅತ್ಯಂತ ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ಈತ ಇಲ್ಲಿನ ಸ್ಥಳೀಯ ದಿನಸಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯ ಉದ್ಘಾಟನೆ -ಕಹಳೆ ನ್ಯೂಸ್

ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದರು, ಶಾರದ ಯಕ್ಷಗಾನ ಮಂಡಳಿ ಪೆರ್ಮುದೆ ಇದರ ಅಧ್ಯಕ್ಷರಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ನುಡಿದರು. ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು....
ದಕ್ಷಿಣ ಕನ್ನಡಸುದ್ದಿ

ಕಾಂಪೌAಡ್ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣ – ಮೃತದೇಹ ಹೊರತೆಗೆಯಲು ಸ್ಥಳೀಯರ ಕಾರ್ಯಾಚರಣೆ-ಕಹಳೆ ನ್ಯೂಸ್

ಉಳ್ಳಾಲ : ಭಾರೀ ಮಳೆಯ ಹಿನ್ನೆಲೆಯಲ್ಲಿ ಮನೆಯೊಂದರ ಮೇಲೆ ಪಕ್ಕದ ಮನೆಯ ಕಾಂಪೌAಡ್ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಮೂವರ ಶವಗಳನ್ನು ಹೊರ ತೆಗೆಯಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಜ್ಯಾದ್ಯಂತ ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಅಭಿಯಾನದ ಪೂರ್ವ ಸಿದ್ಧತಾ ಗಿಡ ನಾಟಿ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕರ್ನಾಟಕ ರಾಜ್ಯದ್ಯಾಂತ ನಡೆಸುವ ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಪೂರ್ವಸಿದ್ಧತೆಯಾಗಿ ಇಂದು ಉಡುಪಿ ಪ್ರಾದೇಶಿಕ ವಿಭಾಗದ ಬಂಟ್ವಾಳ ತಾಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರ ಮಾರ್ಗದರ್ಶನದಲ್ಲಿ ಗಿಡ ನಾಟಿ ಮಾಡಲಾಯಿತು. ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವೈಜ್ನಾನಿಕವಾಗಿ ಕಿರು ಜೆಟ್ಟಿ ಕಾಮಗಾರಿ ನಡೆಸಲು ಸೂಚನೆ: ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಪಣಂಬೂರು: ಮಂಗಳವಾರ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮೀನುಗಾರರ ಅಭಿಪ್ರಾಯ ಸಂಗ್ರಹಿಸಿದರಲ್ಲದೆ , ಸಂಬAಧ ಆಧಿಕಾರಿಗಳಿಗೆ ಸೂಚನೆ ನೀಡಿ ಸಮರ್ಪಕ ಕಾಮಗಾರಿ ಆದೇಶ ನೀಡಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ವಋತು ಬಂದರು ಆಗಿ ಮೀನುಗಾರಿಕೆ ವರ್ಷಪೂರ್ತಿ ನಡೆಯುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಕಿರು ಜೆಟ್ಟಿ ನಿರ್ಮಾಣಗೊಳ್ಳಬೇಕಿದೆ. ಈಗಿರುವ ಬ್ರೇಕ್ ವಾಟರ್ ಉದ್ದಕ್ಕಿಂತ ಅಂದಾಜು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪಡುವನ್ನೂರು ಗ್ರಾಮದ ಗ್ರಾಮ ಸಹಾಯಕರ ವಿರುದ್ದ ಶಾಸಕ ಅಶೋಕ್ ರೈ ಅವರಿಗೆ ದೂರು– ಕಹಳೆ ನ್ಯೂಸ್

ಪುತ್ತೂರು: ಪಡುವನ್ನೂರು ಗ್ರಾಮದ ಗ್ರಾಮ ಸಹಾಯಕರು ಗ್ರಾಮಸ್ಥರಿಗೆ ಸರಕಾರಿ ಸೌಲಭ್ಯ ಪಡೆಯುವಲ್ಲಿ ತೊಂದರೆ ನೀಡುತ್ತಿದ್ದು ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದ್ದಾರೆ. ಸಾರ್ವಜನಿಕ ಮೂಲಭೂತ ಸೌಲಭ್ಯಗಳಾದ 946, 57, ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯುವಲ್ಲಿ ಗ್ರಾಮ ಸಹಾಯಕರು ತೊಂದರೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುವ ರಘು ಎಂಬವರಿಂದ ಸಾರ್ವಜನಿಕರಿಗೆ ಸಂಬಂಧಪಟ್ಟಂತೆ ಮಹಿಳೆಯರ ಪಿಂಚಣಿ, ವಿಧವಾ...
1 376 377 378 379 380 739
Page 378 of 739