ಮಂಗಳೂರು ವಕೀಲರ ಸಂಘದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರಿಂದ ಭರವಸೆ – ಕಹಳೆ ನ್ಯೂಸ್
ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜಿಲ್ಲಾ ನ್ಯಾಯಾಲಯದ ಸಂಕೀರ್ಣ ದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದಂತಹ ಶ್ರೀ ರವೀಂದ್ರ ಎಂ ಜೋಶಿ ವಹಿಸಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಕೀಲ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಪೃಥ್ವಿರಾಜ್ ರೈ ಅವರು...







