ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025 – ಕಹಳೆ ನ್ಯೂಸ್
ಪಟ್ಟೆ ಬಡಗನ್ನೂರು:- ದಿನಾಂಕ:- ನ. 08 ರಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ ವಿದ್ಯಾ ಸಂಸ್ಥೆಯ ಆವರಣದಲ್ಲಿ ಜರಗಿತು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ದೀಪ ಪ್ರಜ್ಜಲನೆ ಮಾಡುವ ಮೂಲಕ ಸುಸಂಸ್ಕೃತವಾದಂತಹ ವಿದ್ಯೆಯನ್ನು...







