ಸರಕಾರಿ ಕಚೇರಿಯೊಳಗೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನ-ಕಹಳೆ ನ್ಯೂಸ್
ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊರ್ವ ಸರಕಾರಿ ಕಚೇರಿಯೊಳಗೆ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದ್ದು, ಆತನನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಅದಕ್ಕೂ ಮೊದಲು ಆತನನ್ನು ಸಿ.ಡಿ.ಪಿ.ಒ.ಇಲಾಖೆಯ ಸಿಬ್ಬಂದಿ ಗಳು ಸೇರಿ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ.ಮಹಾರಾಷ್ಟ್ರ ಮೂಲದ ಪ್ರಕಾಶ್ ಚೌಗಲೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ ಎಂದು ಹೇಳಲಾಗಿದೆ....







