ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆ – ಕಹಳೆ ನ್ಯೂಸ್
ಬಡಗನ್ನೂರು:- ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ ಇವರು ವಹಿಸಿ, ಪ್ರತಿ ಮಗುವಿನಲ್ಲಿಯೂ ವಿವಿಧ ರೀತಿಯ ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ ಬಹುಮುಖ್ಯವಾದುದು...







