ವಿಟ್ಲ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆ ಆಗ್ರಹಿಸಿ ವಿ.ಹಿಂ.ಪ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಿದ್ದ ಮನವಿಗೆ ಸ್ಪಂದನೆ : ಸೂಕ್ತ ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ಸಚಿವರಿಂದ ಮನವಿ- ಕಹಳೆ ನ್ಯೂಸ್
ವಿಟ್ಲ: ಇತ್ತೀಚಿಗೆ ಕನ್ಯಾನದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಲವ್ ಜಿಹಾದ್‍ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಆಗ್ರಹಿತ್ತು. ಈ ಬಗ್ಗೆ ಕರ್ನಾಟಕ ಸರಕಾರದ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ ಸುನಿಲ್ ಕುಮಾರ್‍ರನ್ನು ಭೇಟಿ ಮಾಡಿದ...







