ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು : ಪ್ರವೇಶ ನಿರಾಕರಿಸಿದ ಕಾಲೇಜು ಪ್ರಾಂಶುಪಾಲರು – ಕಹಳೆ ನ್ಯೂಸ್
ಮಂಗಳೂರು: ಕಾಲೇಜಿಗೆ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದು, ಈ ವೇಳೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ ಘಟನೆ ನಗರದ ವಿವಿ ಘಟಕ ಕಾಲೇಜಿನಲ್ಲಿ ನಡೆದಿದೆ. ಇಂದು ಕೂಡ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಸಿ ಬಂದಿದ್ದಾರೆ. ಆದರೆ ಪ್ರಾಂಶುಪಾಲರು ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದು, ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆಯಲಾಯಿತು. ಶುಕ್ರವಾರ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಯಾವುದೇ ಕಾರಣಕ್ಕೂ...







