Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿ ಕಾಲೇಜಿನಲ್ಲಿ ತತ್ತ್ವಜ್ಞಾನಿಗಳ ದಿನಾಚರಣೆ : “ಶಂಕರಾಚಾರ್ಯರರ ಬಗೆಗಿನ ಅನುಸಂಧಾನ ಅಗತ್ಯ” : ಡಾ.ವಿನಾಯಕ ಭಟ್ಟ ಗಾಳಿಮನೆ – ಕಹಳೆ ನ್ಯೂಸ್

ಪುತ್ತೂರು: ದೇವ ಜೀವರ ಭಾವೈಕ್ಯವನ್ನು ಜಗತ್ತಿಗೆ ತೋರಿಕೊಟ್ಟವರು ಶಂಕರಾಚಾರ್ಯರು. ವಿವಿಧ ಆಚರಣೆಗಳ ಮೂಲಕ ವೈರುಧ್ಯಗಳಲ್ಲಿ ಬದುಕುತ್ತಿದ್ದ ಜನರಿಗೆ ಪಂಚಾಯತನ ಪೂಜೆಯ ಕಲ್ಪನೆಯನ್ನು ನೀಡಿ ಇಡಿಯ ಹಿಂದೂ ಸಮಾಜವನ್ನು ಒಗ್ಗೂಡಿಸಿದವರು. ಅವರನ್ನು ಅರಿಯುವುದೇ ನಮ್ಮ ಬದುಕಿಗೆ ಹೊಸ ದಾರಿದೀಪವಾಗುತ್ತದೆ. ರಾಷ್ಟ್ರ, ಭಕ್ತಿ ಹಾಗೂ ತತ್ತ್ವಜ್ಞಾನದ ನೆಲೆಯಲ್ಲಿ ಭಗವಾನ್ ಶಂಕರರ ಅನುಸಂಧಾನ ನಡೆಯಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಎನ್‍ಡಿಎ – ಎನ್‍ಎ-1 ಪರೀಕ್ಷೆ ತೇರ್ಗಡೆಯಾದ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ಅನುಷ್ ಎ.ಎಲ್ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ವರ್ಷದ ವಿಜ್ಞಾನ ವಿದ್ಯಾರ್ಥಿ ಅನುಷ್ ಎ.ಎಲ್. ಅವರು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ನಡೆಸಿದ ಎನ್.ಡಿ.ಎ (ನ್ಯಾಶನಲ್ ಡಿಫೆನ್ಸ್ ಅಕಾಡೆಮಿ) ಎನ್ 1 ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಸುಳ್ಯದ ಗುತ್ತಿಗಾರಿನ ಮೆಸ್ಕಾಂನಲ್ಲಿ ಜೂನಿಯರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕಡಬದ ಎಣ್ಣೆಮಜಲಿನ ಲೋಕೇಶ್ ಎ ಹಾಗೂ ಉಷಾ ಬಿ. ದಂಪತಿ ಪುತ್ರ. ನ್ಯಾಶನಲ್ ಡಿಫೆನ್ಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಮಾಯಣ,ಮಹಾಭಾರತದ ಮೌಲ್ಯದ ಪರಿಕಲ್ಪನೆ ಕುರಿತು ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶೇಷ ಉಪನ್ಯಾಸ- ಕಹಳೆ ನ್ಯೂಸ್

ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ವ್ಯಕ್ತಿತ್ವ ವಿಕಸನ ಶಿಬಿರ ತರಂಗ 2022 ಇದರ ಮೂರನೇ ದಿನದ ಕಾರ್ಯಕ್ರಮದಲ್ಲಿ ಬೆಟ್ಟಂಪಾಡಿಯ ನವೋದಯ ಶಾಲೆಯ ನಿಕಟಪೂರ್ವ ಸಂಚಾಲಕರಾದ ಮಂಜಳಗಿರಿ ವೆಂಕಟರಮಣ ಭಟ್ ಇವರು ರಾಮಾಯಣ,ಮಹಾಭಾರತದ ಮೌಲ್ಯದ ಪರಿಕಲ್ಪನೆ ಕುರಿತು ಎಂಬ ವಿಷಯದ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. “ಭರತಖಂಡದ ಆಧ್ಯಾತ್ಮಿಕ ಗ್ರಂಥಗಳಾದ ರಾಮಾಯಣ ,ಮಹಾಭಾರತ ವಿಶ್ವಕ್ಕೇ ಮಾರ್ಗದರ್ಶಕಗಳಾಗಿದೆ.ಎಲ್ಲರೂ ಅನುಸರಿಸುವ ಮಹೋನ್ನತ ,ಮಾನವೀಯ...
ದಕ್ಷಿಣ ಕನ್ನಡಸಿನಿಮಾಸುದ್ದಿ

ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ತುಳು ಸಿನಿಮಾ ನಟ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ – ಕಹಳೆ ನ್ಯೂಸ್

ತುಳು ಸಿನಿಮಾರಂಗದ ರಾಕ್‌ಸ್ಟಾರ್ ನಟ ನಿರ್ದೇಶಕ ರೂಪೇಶ್ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ತುಳು, ಕನ್ನಡ ಚಿತ್ರರಂಗದಲ್ಲಿ ಭಾರಿ ಸದ್ದು ಮಾಡಿ ಸುದ್ದಿಯಾಗಿದ್ದ ಇವರು ಇದೀಗ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವ ಮೂಲಕ ಮತ್ತಷ್ಟು ಅಭಿಮಾನಿಗಳಿಗೆ ನಟನೆ ಮೂಲಕ ಮನರಂಜನೆ ನೀಡಲಿದ್ದಾರೆ. ಚೇತನ್ ರಾಜ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ತೆಲುಗು ಚಲನಚಿತ್ರದಲ್ಲಿ ನಟನೆ ಮಾಡಲಿದ್ದು, ಈ ಮೂಲಕ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದಾರೆ ರೂಪೇಶ್ ಶೆಟ್ಟಿ. ಆಂಟನಿ ಎಂ ನಿರ್ದೇಶನದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು “ತರಂಗ 2022” ವಿಶೇಷ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು : “ವಿದ್ಯಾರ್ಥಿಗಳಿಗೆ ಹೊಸ ಜಗತ್ತಿನ ನಿಯಮಗಳ ಪರಿಚಯ ಮಾಡುವ ಜೊತೆಗೆ ಸೂಕ್ತ ಜ್ಞಾನ ನೀಡುವುದು ಅವಶ್ಯಕವಾಗಿದೆ. ಇಂದಿನ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಪರಿವರ್ತನೆ ತಂದು ಕಲಿಕೆಯಲ್ಲಿ ಆಸಕ್ತಿ ಮೂಡಿಸವಂತೆ ಮಾಡುತ್ತದೆ. ಸಮಾಜಕ್ಕೆ ಒಬ್ಬ ಪರಿಣಿತ ಶಕ್ತಿಯಾಗಿ ಬದುಕು ಸಾಗಿಸಬೇಕು .“ಎಂದು ಬೆಟ್ಟಂಪಾಡಿಯ ನವೋದಯ ಶಾಲೆಯ ನಿಕಟಪೂರ್ವ ಸಂಚಾಲಕರಾದ ಮಂಜಳಗಿರಿ ವೆಂಕಟರಮಣ ಭಟ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ವೇದ ಪದ್ಧತಿ ವೇಗದಲ್ಲಿ ಗಣಿತ ನೆನಪು ಕುರಿತು ವಿಶೇಷ ಉಪನ್ಯಾಸ : “ಆತ್ಮಸಾಕ್ಷಿಯ ಜೊತೆ ಮೌಲ್ಯ ಮಾರ್ಗ ಅನುಸರಿಸಿ” – ಚಾರ್ಟರ್ಡ್ ಅಕೌಂಟೆಂಟ್ ಅನೀಶ್ – ಕಹಳೆ ನ್ಯೂಸ್

ಪುತ್ತೂರು : “ವಿದ್ಯಾರ್ಥಿಗಳು ನಂಬಿಕೆಗಳ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕು. ಮೌಲ್ಯದ ಬೇರುಗಳು ಗಟ್ಟಿಯಾದಾಗ ಎಲ್ಲಿ ಬೇಕಾದರೂ ಜೀವನ ಕಂಡುಕೊಳ್ಳಬಹುದು. ಬದುಕಿನ ಯಾವುದೇ ಪರೀಕ್ಷೆಗಳನ್ನು ಎದುರಿಸಬಹುದು.“ ಎಂದು ನರೇಂದ್ರ ಪ.ಪೂ ಕಾಲೇಜಿನಲ್ಲಿ ನಡೆದ ವೇದ ಪದ್ಧತಿ ವೇಗದಲ್ಲಿ ಗಣಿತ ನೆನಪು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪುತ್ತೂರಿನ ಚಾರ್ಟರ್ಡ್ ಅಕೌಂಟೆಂಟ್ ಅನೀಶ್ ಇವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಪ್ಯದಲ್ಲಿ ನಡೆಯುವ ನಾಗಮಂಡಲೋತ್ಸವ; ಇಂದು ವಿಶೇಷ ಪ್ರಾರ್ಥನೆ, ಧಾರ್ಮಿಕ ಸಭಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಸಂಪ್ಯ ಶ್ರೀ ಅನ್ನಪೂಣೇಶ್ವರಿ ಕ್ಷೇತ್ರ ಉದಯಗಿರಿಯಲ್ಲಿ ಮೇ 10 ರಂದು ನಾಗಮಂಡಲೋತ್ಸವ ನಡಯಲಿದ್ದು, ಇಂದು ಮೇ9ರಂದು ಶ್ರೀ ಅನ್ನಪೂರ್ಣೇಶ್ವರಿ ದೇವರ ಮುಂಭಾಗದಲ್ಲಿ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯ ಮುಖೇನ ವಿಶೇಷ ದೇವತಾ ಪ್ರಾರ್ಥನೆ ನಡೆಯಿತು. ನಂತರ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನೆರವೇರಿತು. ಪರಮಾಪೂಜ್ಯ ಕರ್ಮಯೋಗಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಇವರು ದೀಪಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯ ಉಚ್ಚ ನ್ಯಾಯಾಲಯದ ಮತ್ತು ದ.ಕ.ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ನ್ಯಾಯಮೂರ್ತಿ ಕೆ ಸೋಮಶೇಖರ್ – ಕಹಳೆ ನ್ಯೂಸ್

ಪುತ್ತೂರು: ಮೇ.7ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶ ಮತ್ತು ದಕ್ಷಿಣ ಕನ್ನಡ ಆಡಳಿತಾತ್ಮಕ ನ್ಯಾಯಾಧೀಶ ನ್ಯಾಯಮೂರ್ತಿ ಕೆ ಸೋಮಶೇಖರ್ ಅವರು ಕುಟುಂಬ ಸಮೇತ ಭೇಟಿ ನೀಡಿ ಶ್ರೀ ದೇವರ ಮಹಾಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಈ ಹಿಂದೆ ಪುತ್ತೂರಿನಲ್ಲಿ ನ್ಯಾಯಾಧೀಶರಾಗಿದ್ದು ಇದೀಗ ಬೆಂಗಳೂರು ಲೋಕಾಯುಕ್ತ ನ್ಯಾಯಾಧೀಶರಾಗಿರುವ ಬಸವರಾಜ್, ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಜೊತೆಯಲ್ಲಿದ್ದರು. ದೇವಳಕ್ಕೆ ಭೇಟಿ...
1 606 607 608 609 610 725
Page 608 of 725