Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಮಾ.30ರಂದು ಬಂದಾರು, ಪೆಲತ್ತಿಮಾರಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ 20ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಬಂದಾರು : ಮಾ.30ರಂದು ಬಂದಾರು, ಪೆಲತ್ತಿಮಾರಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಂದಾರು ಒಕ್ಕೂಟ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಬಂದಾರು, ಜನಜಾಗೃತಿ ಗ್ರಾಮ ಸಮಿತಿ, ಬಂದಾರು ಇವರ ಸಹಕಾರದೊಂದಿಗೆ ಶ್ರೀ ವಿಷ್ಣುಮೂರ್ತಿ ದೇವರ ಪೂಜಾ ಪುನರಾರಂಭದ 20ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದಲ್ಲಿ ಪ್ರೇರಣಾ– 2022 ಬೇಸಿಗೆ ಶಿಬಿರಕ್ಕೆ ಚಾಲನೆ- ಕಹಳೆ ನ್ಯೂಸ್

ಪುತ್ತೂರು: ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ ಅಧ್ಯಯನ ನಡೆಯುತ್ತಿದೆ. ಇಂತಹ ಶ್ರೇಷ್ಟ ಮಣ್ಣಿನ ಬಗೆಗಿನ ಅರಿವು ಮಕ್ಕಳಲ್ಲಿ ಒಡಮೂಡಬೇಕಾದದ್ದು ಅತ್ಯಂತ ಅಗತ್ಯ. ಆದ್ದರಿಂದ ರಜೆಯಲ್ಲಿ ಆಯೋಜಿಸುವ ಶಿಬಿರಗಳು ಇಂತಹ ಜ್ಞಾನವನ್ನು ನೀಡುವ ತಾಣಗಳಾಗಬೇಕು ಎಂದು ಪುತ್ತೂರಿನ ಹಿರಿಯ ಕನ್ನಡ ಪ್ರಾಧ್ಯಾಪಕ, ಸಾಹಿತಿ ಡಾ.ಶ್ರೀಧರ ಎಚ್.ಜಿ.ಹೇಳಿದರು. ಅವರು ನಗರದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಎರಡು ಐ20 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಡಿಕ್ಕಿಯ ರಭಸಕ್ಕೆ ಎರಡು ಕಾರಿನ ಮುಂಬದಿ ಜಖಂ – ಕಹಳೆ ನ್ಯೂಸ್

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಪುತ್ತೂರಿನ ಕೆಮ್ಮಾಯಿ ಬಳಿ ನಡೆದಿದೆ. ಎರಡು ಐ20 ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡು ಕಾರಿನ ಮುಂಬದಿ ಜಖಂಗೊಂಡಿದೆ. ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಂಪು ಬಣ್ಣದ ಐ20 ಕಾರು, ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಿಳಿ ಬಣ್ಣದ ಐ20 ಕಾರಿಗೆ ಡಿಕ್ಕಿ ಹೊಡೆದಿದೆ. ಡಿವೈಡರ್‍ಗೆ ಡಿಕ್ಕಿಯಾಗಿ ಬಳಿಕ ಉಪ್ಪಿನಂಗಡಿಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಮುಂಬಾಗದಲ್ಲಿ...
ದಕ್ಷಿಣ ಕನ್ನಡಸುದ್ದಿ

ಕೊಟ್ಟಾರಿ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಚೇತನ್ ಕೊಟ್ಟಾರಿ ಪಂಪ್ ವೆಲ್ ಆಯ್ಕೆ-ಕಹಳೆ ನ್ಯೂಸ್

ಮಂಗಳೂರು;ಕೊಟ್ಟಾರಿ ಯುವ ವೇದಿಕೆ ದ.ಕ. ಜಿಲ್ಲೆ ಇದರ 2021-2022ನೇ ಸಾಲಿನ ವಾರ್ಷಿಕ ಮಹಾಸಭೆಯು ಮಾತೃ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಕೊಟ್ಟಾರಿ ಹಾಗೂ ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ ಯವರ ನೇತೃತ್ವದಲ್ಲಿ ಮಂಗಳೂರು ನಗರದ ಪಡೀಲ್ ನಲ್ಲಿರುವ ಕೊಟ್ಟಾರಿ ಸಭಾ ಭವನದಲ್ಲಿ ಜರಗಿತು.ಯುವ ವೇದಿಕೆಯ ನೂತನ ಅಧ್ಯಕ್ಷ ರಾಗಿ ಚೇತನ್ ಕೊಟ್ಟಾರಿ ಪಂಪುವೆಲ್ ಆಯ್ಕೆ ಯಾದರು, ಉಪಾಧ್ಯಕ್ಷರಾಗಿ ವಿಜಯ ಕೊಟ್ಟಾರಿ ಅಡ್ಯಾರ್ ದೋಟ, ಹಾಗೂ ಹರೀಶ್ ಕೊಟ್ಟಾರಿ ಕುತ್ತಾರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಪಘಾತಕ್ಕೊಳಗಾಗಿ ಗಾಯಗೊಂಡಿದ್ದ ಗಾಯಳುಗಳನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ನಗರಸಭಾ ಸದಸ್ಯ – ಕಹಳೆ ನ್ಯೂಸ್

ಪುತ್ತೂರು: ಅಪಘಾತಕ್ಕೊಳಗಾಗಿ ಗಾಯಗೊಂಡಿದ್ದ ಗಾಯಳುಗಳನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಮಾನವೀಯತೆ ಮೆರೆದಿದ್ದಾರೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಪ್ಪಳಿಗೆ ಸಮೀಪ ಸ್ಕೂಟರ್ ವೊಂದು ಸ್ಕಿಡ್ ಆಗಿ ಸ್ಕೂಟರ್ ನಲ್ಲಿದ್ದ ತಂದೆ ಮಗಳು ರಸ್ತೆಗೆ ಬಿದ್ದ ಗಾಯಗೊಂಡಿದ್ದರು. ಇದೇ ಸಂದರ್ಭದಲ್ಲಿ ಅದೇ ದಾರಿಯಾಗಿ ಕಚೇರಿಗೆ ಹೋಗುತ್ತಿದ್ದ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಗಾಯಳುಗಳನ್ನು ತನ್ನದೇ ವಾಹನದಲ್ಲಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ತಾಲೂಕಿನಲ್ಲಿ ಕೊಳವೆ ಬಾವಿ ಕೊರೆಯಲು ಹೆಚ್ಚಿನ ಅವಕಾಶ ಕಲ್ಪಿಸಿ ; ಸದನದಲ್ಲಿ ಮನವಿ ಮಾಡಿಕೊಂಡ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಬೆಂಗಳೂರು, ಮಾ. 24 : ಪುತ್ತೂರು ತಾಲೂಕಿನಲ್ಲಿ ಕೊಳವೆ ಬಾವಿ ಕೊರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಶಾಸಕ ಸಂಜೀವ ಮಠಂದೂರು ವಿಚಾರ ಪ್ರಸ್ತಾಪಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ವಿಚಾರ ಪ್ರಸ್ತಾಪಿಸಿದ ಅವರು, ಗಂಗಾಕಲ್ಯಾಣದಡಿ ಕೊಳವೆ ಬಾವಿ ಕೊರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರು ಪ್ರಸ್ತಾಪಿಸಿದ್ದಾರೆ. ದ.ಕ. ಜಿಲ್ಲೆಗೆ ದೊಡ್ಡ ಪ್ರಮಾಣದ ಜಲ ಮೂಲಗಳಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಗೆ ಹಾಗೂ ಇನ್ನಿತರ ಕಾರ್ಯಗಳಿಗೆ ನೀರಿನ ಮೂಲವನ್ನಾಗಿ ಕೊಳವೆಬಾವಿಯನ್ನೇ ಅವಲಂಬಿಸಬೇಕಾಗುತ್ತದೆ. ಈ ಕಾರಣದಿಂದಾಗಿ ಕೊಳವೆ ಬಾವಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ಬೈಕ್- ಜೀಪು ಮಧ್ಯೆ ಭೀಕರ ಅಪಘಾತ: ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಮತ್ತೋರ್ವನ ಸ್ಥಿತಿ ಗಂಭೀರ –ಕಹಳೆ ನ್ಯೂಸ್

ಸುಳ್ಯ : ಬೈಕ್ ಹಾಗೂ ಜೀಪು ಮಧ್ಯೆ ಭೀಕರ ಅಪಘಾತ ನಡೆದು ಓರ್ವ ಗಾಯಗೊಂಡು ಮತ್ತೋರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಸುಳ್ಯದ ಕುಂಬಳಚೇರಿ ಎಂಬಲ್ಲಿ ನಡೆದಿದೆ. ಪೆರಾಜೆಯ ದರ್ಶನ್ ಮತ್ತು ವಿಶ್ವದೀಪ್ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕುಂಬಳಚೇರಿ ಬಳಿಯ ಗಡಿ ಗುಡ್ಡೆ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಜೀಪ್ ಗೆ ಡಿಕ್ಕಿ ಹೊಡೆಯುವುದನ್ನು...
ದಕ್ಷಿಣ ಕನ್ನಡಸುದ್ದಿ

ಮಾ. 25ರಂದು ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ವಿಕಲಚೇತನರ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ನವೀಕರಣ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮಂಗಳೂರು, ವೆನ್ಲಾಕ್ ಸಾರ್ವಜನಿಕ ಆಸ್ಪತ್ರೆ ಮಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ, ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ, ಕೃಷಿಪತ್ತಿನ ಸಹಕಾರಿ ಬ್ಯಾಂಕ್ ಪದ್ಮುಂಜ, ಸೇವಾ ಸಹಕಾರಿ ಬ್ಯಾಂಕ್ ಬಾರ್ಯ, ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಗ್ರಾಮ ಪಂಚಾಯತ್ ತೆಕ್ಕರೂ, ಗ್ರಾಮ ಪಂಚಾಯತ್ ತಣ್ಣೀರು ಪಂಥ, ಗ್ರಾಮ ಪಂಚಾಯತ್ ಬಂದಾರು, ಗ್ರಾಮ ಪಂಚಾಯತ್ ಮಚ್ಚಿನ, ಗ್ರಾಮ...
1 618 619 620 621 622 725
Page 620 of 725