ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.10ರಿಂದ ನಡೆಯುವ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರವನ್ನು ಮಾ.21ರಂದು ದೇವಳದ ಹೊರಾಂಗಣದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿದರು. ದೇವಳದ ಪ್ರಧಾನ ಅರ್ಚಕರಾದ ವಸಂತ ಕೆದಿಲಾಯ ಅವರು ಮುದ್ರಿತ ಆಮಂತ್ರಣ ಪತ್ರಿಕೆಯನ್ನು ದೇವಳದ ಸತ್ಯಧರ್ಮ ನಡೆಯಲ್ಲಿಟ್ಟು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಆಮಂತ್ರಣ ಪತ್ರಕ್ಕೆ ಗಂಧ ಪ್ರಸಾದ ಲೇಪಿಸಿ ಪವಿತ್ರಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ...







