Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಮಂಗಳಾದೇವಿ ದೇವಸ್ಥಾನಕ್ಕೆ ಹೋಗುವ ಪ್ರಮುಖ ರಸ್ತೆಯಲ್ಲಿ ಅಳವಡಿಸಲಾದ ತುಳು ಲಿಪಿಯ ನಾಮಫಲಕ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಸುಪ್ರಸಿದ್ಧ ಮಂಗಳಾದೇವಿ ದೇವಸ್ಥಾನಕ್ಕೆ ಹೋಗುವ ಪ್ರಮುಖ ರಸ್ತೆಯಲ್ಲಿ ತುಳು ಲಿಪಿಯ ನಾಮಫಲಕವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಕೆಲವು ಸಮಯದ ಹಿಂದೆ ತುಳು ಸಂಘಟನೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶಿಶ್ಮಿತ ಎನ್ಮುವ ಪುಟ್ಟ ಹುಡುಗಿ ಮಂಗಳದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಸುವಂತೆ ಸ್ವತಃ ತಾನೇ ತುಳು ಲಿಪಿಯಲ್ಲಿ ಮನವಿ ಬರೆದು ನೀಡಿದ್ದಳು. ಆಕೆಯ ಕೋರಿಕೆಯಂತೆ ಮಂಗಳಾದೇವಿ ದೇವಸ್ಥಾನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ – ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ತುಂಬಬೇಕಾದ್ದು ಅತ್ಯಂತ ಅಗತ್ಯ. ಸಂಸ್ಕಾರಯುತ ಶಿಕ್ಷಣ ಮಕ್ಕಳಿಗೆ ದೊರಕಿದಾಗ ಮಾತ್ರ ಉತ್ಕøಷ್ಟ ವ್ಯಕ್ತಿತ್ವ ನಿರ್ಮಾಣಗೊಳ್ಳಬಹುದು. ಆದ್ದರಿಂದ ವಿದ್ಯಾಸಂಸ್ಥೆಗೆ ಮಕ್ಕಳನ್ನು ಸೇರಿಸುವಾಗ ಅಲ್ಲಿ ದೊರಕುವಂತಹ ಶಿಕ್ಷಣದ ಗುಣಮಟ್ಟವನ್ನು ಗಮನಿಸಿ ಕಾರ್ಯಪ್ರವೃತ್ತರಾಗಬೇಕಾದ ಜವಾಬ್ದಾರಿ ಹೆತ್ತವರ ಮೇಲಿದೆ. ಅಂಬಿಕಾ ಪದವಿ ಮಹಾವಿದ್ಯಾಲಯವು ಹೆತ್ತವರಿಗೆ ತಮ್ಮ ಮಕ್ಕಳ ಬಗೆಗಿರುವ ಕನಸುಗಳನ್ನು ನನಸಾಗಿಸುವಂತೆ ಕಾರ್ಯನಿರ್ವಹಿಸುತ್ತಿದೆ ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ...
ದಕ್ಷಿಣ ಕನ್ನಡರಾಜ್ಯಸುದ್ದಿ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಫ್ರೀ ಲಿಂಕ್ ಬಗ್ಗೆ ಇರಲಿ ಎಚ್ಚರ ; ಮಂಗಳೂರಿನಲ್ಲೂ ಸೈಬರ್ ವಂಚನೆ ಬೆಳಕಿಗೆ, ಮಂಗಳೂರಿನ ಸೈಬರ್ ತಜ್ಞ ಡಾ. ಅನಂತ ಪ್ರಭು.ಜಿ ಹೇಳಿದ್ದೇನು‌..!? – ಕಹಳೆ ನ್ಯೂಸ್

ಮಂಗಳೂರು: ದೇಶಾದ್ಯಂತ ಕಾಶ್ಮೀರ್ ಫೈಲ್ಸ್ ಚಿತ್ರ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿದ ಸೈಬರ್ ವಂಚಕರು ಜನರನ್ನು ಲೂಟಿ ಮಾಡಲು ಹೊರಟಿರುವುದು ಬೆಳಕಿಗೆ ಬಂದಿದೆ. ಚಿತ್ರವನ್ನು ಉಚಿತವಾಗಿ ತೋರಿಸುವ ನೆಪದಲ್ಲಿ ಮೊಬೈಲ್‌ಗೆ ಲಿಂಕ್ ಕಳುಹಿಸಿ ವಂಚನೆ ಮಾಡುತ್ತಿರುವ ಬಗ್ಗೆ ಸೈಬರ್ ತಜ್ಞರು ಎಚ್ಚರಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಉಚಿತವಾಗಿ ಡೌನ್‌ಲೋಡ್ ಮಾಡಬಹುದೆಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಲಿಂಕ್ ಹರಿದಾಡುತ್ತಿದೆ. ಒಂದು ವೇಳೆ ಸುಲಭ, ಉಚಿತವಾಗಿ ಸಿನಿಮಾ ನೋಡುವ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಹಿಜಾಬ್ ಧರಿಸದೆ ತರಗತಿಗೆ ಹಾಜರಾಗಲು ಒಪ್ಪಿದ ಉಪ್ಪಿನಂಗಡಿ ಪಿಯು ಕಾಲೇಜಿನ ಮುಸಲ್ಮಾನ ವಿದ್ಯಾರ್ಥಿನಿಯರು – ಕಹಳೆ ನ್ಯೂಸ್

ಉಪ್ಪಿನಂಗಡಿ, ಮಾ 21 : ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗುತ್ತೇನೆ ಎಂಬ ನಿಲುವಿಗೆ ಅಂಟಿಕೊಂಡಿದ್ದ ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಇದೀಗ ಕಾಲೇಜಿನ ಸಮವಸ್ತ್ರ ನಿಯಮಾವಳಿಗಳನ್ನು ಪಾಲಿಸಿ ಇಂದಿನಿಂದಲೇ ತರಗತಿಗಳಿಗೆ ಹಾಜರಾಗಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.   ಹೈಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗಬಾರದೆಂದು ಕಾಲೇಜು ಆಡಳಿತದ ತಿಳಿಸಿದ್ದು, ಇದಕ್ಕೆ ವಿದ್ಯಾರ್ಥಿಗಳು ವಿರೋಧಿಸಿ ತರಗತಿ ಮತ್ತು ಪರೀಕ್ಷೆಗಳನ್ನು ಬಹಿಷ್ಕರಿಸಿದ್ದರು. ಇತ್ತ ಪ್ರತಿಭಟನಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃಧ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ರೂ.3.5ಕೋಟಿ ಅನುದಾನದ ರಸ್ತೆ ಮತ್ತು ವಿವಿಧ ಅಭಿವೃಧ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರು, ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು ಹಾಗೂ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ : ಎಳನೀರು ಕೊಚ್ಚುವ ಮಚ್ಚು ಹಿಡಿದು ಬೆದರಿಸಿ ದರೋಡೆ : ಚಿನ್ನಾಭರಣ ದೋಚಿ ಖದೀಮರು ಪರಾರಿ – ಕಹಳೆ ನ್ಯೂಸ್

ಸುಳ್ಯ : ಎಳನೀರು ಕೊಚ್ಚುವ ಮಚ್ಚು ಹಿಡಿದು ಬೆದರಿಸಿ ನಗ, ನಾಣ್ಯ ದೋಚಿ ಖದೀಮರು ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಿನ್ನೆ ರಾತ್ರಿ 8.30ಕ್ಕೆ ನಡೆದಿದೆ. ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತೀ ದೊಡ್ಡ ಕಳ್ಳತನ ಪ್ರಕರಣವೊಂದು ನಡೆದಿದ್ದು, ಮಾರಕಾಸ್ತ್ರ ಸಜ್ಜಿತ ದರೋಡೆಕೋರರ ತಂಡ ಸಂಪಾಜೆಯ ಚಟ್ಟೆಕಲ್ಲಿನ ಅಂಬರೀಶ್ ಭಟ್ ಅವರ ಅಂಬಾಶ್ರಮ ಮನೆಗೆ ನುಗ್ಗಿ ಅತ್ತೆ ಹಾಗೂ ಸೊಸೆಯನ್ನು ಮಚ್ಚು ಹಿಡಿದು ಬೆದರಿಸಿ 100 ಗ್ರಾಂ. ಚಿನ್ನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ಪ್ರತಿಭಾ ದಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಪ್ರತಿಭಾ ದಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸುವ ಮೂಲಕ ಹಿರಿಯ ವಿದ್ಯಾರ್ಥಿ ಡಾಕ್ಟರ್ ಸಿಂಧುಶ್ರೀ ಬಳ್ಳಕ್ಕುರಾಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನದ ಮೌಲ್ಯಗಳನ್ನು ಮಾತೃಭಾಷೆಯ ಮಾತೃವಾತ್ಸಲ್ಯದ ಜೊತೆ ನೀಡುವ ಶ್ರೇಷ್ಠತೆ ಶ್ರೀರಾಮ ಪ್ರೌಢಶಾಲೆ ಎಂದು ಬಾಲ್ಯದ ನೆನಪಿನ ಬುತ್ತಿಯನ್ನು ವಿದ್ಯಾರ್ಥಿಗಳಿಗೆ ಹಂಚಿದರು. ಹಾಗೂ ಸ್ಪರ್ದೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಇನ್ನೋರ್ವ ಹಿರಿಯ...
ದಕ್ಷಿಣ ಕನ್ನಡಸುದ್ದಿ

ಶಿಕ್ಷಣಕ್ಕಿಂತ ಧರ್ಮವೇ ಮುಖ್ಯ : ಉಪ್ಪಿನಂಗಡಿಯಲ್ಲಿ ಪರೀಕ್ಷೆ ನಿರಾಕರಿಸಿ ಕಾಲೇಜಿನಿಂದ ಹೊರನಡೆದ ಮುಸ್ಲಿಂ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಮಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಸಂವಿದಾನ ಬಂಧವಾಗಿ ತೀರ್ಪು ಪ್ರಕಟಿಸಿದೆ. ಆದರೆ ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಕೋರ್ಟ್ ತೀರ್ಪಿಗೆ ಸ್ವಲ್ಪವೂ ಬೆಲೆ ಕೊಡದೆ ಪಿಯು ಪೂರ್ವ ಸಿದ್ದತಾ ಪರೀಕ್ಷೆಯನ್ನೇ ನಿರಾಕರಿಸಿದ್ದಾರೆ. ಉಪ್ಪಿನಂಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೆಲ ವಿದ್ಯಾರ್ಥಿಗಳು ಶುಕ್ರವಾರ ಹಿಜಾಬ್ ಧರಿಸಿಕೊಂಡು ತರಗತಿಯೊಳಗೆ ಪ್ರವೇಶಿಸಲು ಮುಂದಾಗಿದ್ದು, ಹಿಜಾಬ್ ಕುರಿತಾದ ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪಿನ ಹಿನ್ನೆಲೆ ಉಪನ್ಯಾಸಕರು ಅದಕ್ಕೆ ಅವಕಾಶ ಕೊಡಲಿಲ್ಲ. ಅದನ್ನು ವಿರೋಧಿಸಿದ...
1 620 621 622 623 624 725
Page 622 of 725