Wednesday, April 29, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ, ಕಲ್ಲೆಟ್ಟ : ಫೆ. 24ರಂದು ನಡೆದ 108 ತೆಂಗಿನಕಾಯಿ ಶ್ರೀ ಮಹಾಗಣಪತಿ ಹೋಮ, ಶ್ರೀ ಐಕ್ಯಮತ್ಯ ಸೂಕ್ತ ಹವನ, ಜಪ, – ಕಹಳೆ ನ್ಯೂಸ್

ಬಂಟ್ವಾಳ: ಬರಿಮಾರು ಗ್ರಾಮದ ಶ್ರೀ ಕಾನಲ್ತಾಯ ಮಹಾಕಾಳಿ ಕಲ್ಲೆಟ್ಟಿ ದೈವಸ್ಥಾನದಲ್ಲಿ ನಡೆದ ಅಷ್ಟಮಂಗಲ ಸ್ವರ್ಣಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಊರ-ಪರವೂರ ಸಮಸ್ತ ಭಕ್ತಾದಿಗಳ ಆಪತ್ತು ನಿವೃತ್ತಿ, ವಿಘ್ನ ನಿವಾರಣೆ, ಕಾರ್ಯ ಜಯ, ಮೃತ್ಯುಂಜಯ, ಐಕ್ಯಮತ್ಯ ಹಾಗೂ ಸಾನ್ನಿಧ್ಯಗಳ ಅನುಗ್ರಹ ಮತ್ತು ಇನ್ನಿತರ ಸಮಸ್ತ ದೋಷಗಳಿಗೆ ಪ್ರಾಯಶ್ಚಿತ್ತ ಪರಿಹಾರಗಳನ್ನು ಬ್ರಹ್ಮಶ್ರೀ ನೀಲೇಶ್ವರ ಕೆ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಸಿ, ಪ್ರಸಾದ ಪಡೆಯುವುದೆಂದು ತೀರ್ಮಾರ್ನಿಸಲಾಗಿತ್ತು. ಅದರಂತೆ ಫೆ. 24ರಂದು ಬೆಳಗ್ಗೆ 8.00ರಿಂದ ಶ್ರೀ...
ದಕ್ಷಿಣ ಕನ್ನಡಸುದ್ದಿ

“ಧರ್ಮಕ್ಕಿಂತ ದೇಶ ಮೊದಲು, ಶಿಕ್ಷಣಕ್ಕಿಂತ ದೊಡ್ಡ ಧರ್ಮವಿದೆಯಾ?” : ಹಿಜಾಬ್ ಬಗ್ಗೆ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕಿಗೆ ಅಪರಿಚಿತರಿಂದ ಜೀವ ಬೆದರಿಕೆ- ಕಹಳೆ ನ್ಯೂಸ್

ಮಂಗಳೂರು: ಹಿಜಾಬ್ ಸಂಬಂಧಿಸಿ ಹೇಳಿಕೆ ನೀಡಿದ ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಅವರಿಗೆ ಅಪರಿಚಿತರು ಜೀವ ಬೆದರಿಕೆಯೊಡ್ಡಿದ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರಯ್ಯ ಅಂಜುಮ್ ಅವರು ಇತ್ತೀಚೆಗೆ ಹಿಜಾಬ್ ಧರಿಸುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಧರ್ಮಕ್ಕಿಂತ ದೇಶ ಮೊದಲು, ಶಿಕ್ಷಣಕ್ಕಿಂತ ದೊಡ್ಡ ಧರ್ಮವಿದೆಯಾ?.. ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸಿ ಸಮಾನತೆ ಕಾಪಾಡ ಬೇಕು ಎಂದು ಲೈವ್ ವೀಡಿಯೋ ಪ್ರಸಾರ ಮಾಡಿದ್ದರು. ಇದಾದ ಕೆಲವು ದಿನಗಳ...
ದಕ್ಷಿಣ ಕನ್ನಡಸುದ್ದಿ

ಜಿಪಿಎಲ್‍ನಲ್ಲಿ ಹೆಲಿಕಾಪ್ಟರ್ ಜಾಲಿ ರೈಡ್ : ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋಟ್ರ್ಸ್ ಅಸೋಸಿಯೇಶನ್ ಫುಜ್ಲಾನಾ ಜಿಪಿಎಲ್ ಉತ್ಸವ –ಕಹಳೆ ನ್ಯೂಸ್

ಮಂಗಳೂರು: ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋಟ್ರ್ಸ್ ಅಸೋಸಿಯೇಶನ್ ಆಯೋಜಿಸುವ ಫುಜ್ಲಾನಾ ಜಿಪಿಎಲ್ ಉತ್ಸವಕ್ಕೆ-2022ಕ್ಕೆ ಸಿದ್ಧಗೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ‘ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ. ಫೆ. 25ರಿಂದ 27ರವರೆಗೆ ಈ ಟೂರ್ನಿ ನಡೆಯಲಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತೆಲಂಗಾಣದ ಸೇರಿ ಕರಾವಳಿ ಕರ್ನಾಟಕವನ್ನು ಒಳಗೊಂಡ 16 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ. ಜಿಪಿಎಲ್ ಉತ್ಸವದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಒಂದು ಭಾಗವಾದರೆ, ಇಡೀ ಉತ್ಸವ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಹಿಂದೂ ಯುವತಿಯೊಂದಿಗೆ ಅನ್ಯ ಕೋಮಿನ ಯುವಕನ ಮದುವೆ ; ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ – ಕಹಳೆ ನ್ಯೂಸ್

ಬೆಳ್ತಂಗಡಿ: ನಡ ಗ್ರಾಮದ ಕುತ್ರೊಟ್ಟುವಿನ ದೇವಾಲಯದಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ವಿವಾಹವು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಸತ್ಯನಾರಾಯಣ ದೇವಸ್ಥಾನದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅರೆಹೊಳೆಯ ಸಫ್ವಾನ್ ಎಂಬಾತ ಅದೇ ಗ್ರಾಮದ ಹಿಂದೂ ಯುವತಿಯೊಂದಿಗೆ ವಿವಾಹವಾಗಿದ್ದು, ದೇವಾಲಯದಲ್ಲಿ ಸಾಮರಸ್ಯ ಕದಡಿದ ಬಗ್ಗೆ ತೀವ್ರ ಆಕ್ರೋಶವು ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳು ಈ ಬಗ್ಗೆ ಕಿಡಿಕಾರಿದ್ದು, ನಗರ ಠಾಣೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಪ್ರಕರಣವನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಕ್ತದಾನ ಶಿಬಿರ- ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ರೆಡ್‍ಕ್ರಾಸ್ ಘಟಕ ಮತ್ತು ಎನ್‍ಎಸ್‍ಎಸ್ ಘಟಕ, ರೋವರ್ಸ್ ಎಂಡ್ ರೇಂಜರ್ಸ್ ಮತ್ತು ಎನ್‍ಸಿಸಿ ಘಟಕಗಳು ಮಂಗಳೂರಿನ ಕೆಎಂಸಿ ಬ್ಲಡ್ ಬ್ಯಾಂಕ್ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕೆಎಂಸಿ ಬ್ಲಡ್ ಬ್ಯಾಂಕಿನ ವೈದ್ಯರಾದ ಡಾ| ರಂಜಿತಾ ರಾವ್ ಅವರು ರಕ್ತದಾನದ ಮಹತ್ವವನ್ನು ತಿಳಿಸಿಕೊಡುತ್ತಾ ರಕ್ತದಾನದಿಂದ...
ದಕ್ಷಿಣ ಕನ್ನಡಸುದ್ದಿ

ಜಪ್ಪಿನಮೊಗರು ವಾರ್ಡಿನಲ್ಲಿ 60 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ 60 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯಿಂದ ವೈದ್ಯನಾಥ ದ್ವಾರ ಸಂಪರ್ಕಿಸುವ ಸೇತುವೆಯ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಿಂದ 60 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಹಿಂದೆ ಇಲ್ಲಿನ ನಾಗರಿಕರಿಗೆ ನೀಡಿದ ಭರವಸೆಯಂತೆ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅವರಿಗೆ ಮಾತೃವಿಯೋಗ – ಕಹಳೆ ನ್ಯೂಸ್

ಪುತ್ತೂರು: ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅವರ ತಾಯಿ ಇಂದಿರಾ ಕಜೆ(83 ವ) ರವರು ಫೆ.24 ರಂದು ನಿಧನರಾದರು. ಅನಾರೋಗ್ಯದಿಂದ ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ‘ವಿಶ್ವ ಮಾತೃಭಾಷಾ ದಿನಾಚರಣೆ’ – ಕಹಳೆ ನ್ಯೂಸ್

ಪುತ್ತೂರು : ಪ್ರಪಂಚದಾದ್ಯ0ತ ವಿಶ್ವ ಮಾತೃಭಾಷಾ ದಿನಾಚರಣೆ ಆಚರಿಸಲಾಗುತ್ತದೆ. ಇದರ ಮೂಲ ಉದ್ದೇಶ ಬಹು ಭಾಷೆ ಮತ್ತು ಬಹು ಸಂಸ್ಕೃತಿಯನ್ನು ಗುರುತಿಸಿ, ಉಳಿಸಿ, ಪ್ರೋತ್ಸಾಹಿಸುವಂತದ್ದು ಎಂದು ವಿವೇಕಾನಂದ ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಮತ್ತು ಲಲಿತ ಕಲಾ ಸಂಘದಆಶ್ರಯದಲ್ಲಿ ‘ವಿಶ್ವ ಮಾತೃ ಭಾಷಾ ದಿನ’ದ ಪ್ರಯುಕ್ತ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು....
1 626 627 628 629 630 726
Page 628 of 726