ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆ.7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ; ಜಿಲ್ಲಾಧಿಕಾರಿಗಳ ಆದೇಶದಲ್ಲೇನೇನಿದೆ..!? ಯಾವುದೆಲ್ಲಾ ಓಪನ್..!? ಯಾವುದೆಲ್ಲಾ ಬಂದ್..!? – ಕಹಳೆ ನ್ಯೂಸ್
ಮಂಗಳೂರು, ಜೂ. 20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್.21ರಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಈ ಆದೇಶ ಜುಲೈ 5ರ ಸಂಜೆಯವರೆಗೂ ವಿಸ್ತರಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಜಿಲ್ಲೆಯಾದ್ಯಂತ ಅನ್‌ಲಾಕ್ 1.0 ಭಾಗವಾಗಿ ಅಗತ್ಯವಸ್ತು ಖರೀದಿ ಅವಧಿ ವಿಸ್ತರಣೆ ಮಾಡಲಾಗಿದ್ದು,ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್ ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ....







