ದಕ್ಷಿಣ ಕನ್ನಡ ಪೋಲಿಸ್ ಜಿಲ್ಲಾವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಶಿವಮೊಗ್ಗಕ್ಕೆ ವರ್ಗಾವಣೆ ; ನೂತನ ಎಸ್ಪಿ ಆಗಿ ಸೋನವಾನೆ ರಿಷಿಕೇಶ್ ಭಗವಾನ್ – ಕಹಳೆ ನ್ಯೂಸ್
ಮಂಗಳೂರು, ಎ.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಕ್ಷ ಎಸ್ಪಿ ಎಂದು ಹೆಸರು ಮಾಡಿದ್ದ ಬಿ.ಎಂ. ಲಕ್ಷ್ಮೀಪ್ರಸಾದ್ ಅವರನ್ನು ಶಿವಮೊಗ್ಗ ಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿ ಆಗಿ ಸೋನವಾನೆ ರಿಷಿಕೇಶ್ ಭಗವಾನ್ ಅವರನ್ನು ನೇಮಕ ಮಾಡಲಾಗಿದೆ. ಎರಡು ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಲಕ್ಷ್ಮೀಪ್ರಸಾದ್, ಹಲವು ಪ್ರಕರಣಗಳಲ್ಲಿ ಯಾವುದೇ ಪ್ರಭಾವಕ್ಕೆ ಒಳಗಾಗದೇ ಕೆಲಸ ಮಾಡಿ ಭೇಷ್ ಎನಿಸಿದ್ದಾರೆ. ಉಜಿರೆಯ ಬಾಲಕನ...







