Friday, April 24, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಮಂಗಳೂರಿನ ಕೋವಿಡ್ ಆಸ್ಪತ್ರೆಯಿಂದ ಪುತ್ತೂರಿನ ಸೋಂಕಿತ ಪರಾರಿ – ಕಹಳೆ ನ್ಯೂಸ್

ಮಂಗಳೂರು : ಪುತ್ತೂರು ಮೂಲದ ವ್ಯಕ್ತಿ ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದಿದ್ದವನನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಜುಲೈ ೫ರಂದು ಈತನಿಗೆ ಕೋವಿಡ್ 19 ಇರುವುದು ದೃಢ ಪಟ್ಟಿದೆ‌. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಈತನ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ದಕ್ಷಿಣ ಕನ್ನಡಸುದ್ದಿ

ಗುರುಪುರದಲ್ಲಿ ಗುಡ್ಡ ಕುಸಿದು ಮಕ್ಕಳು ಮೃತ್ಯು ; ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು, ಜು. 05 : ದ.ಕ. ಜಿಲ್ಲೆಯ ಮಂಗಳೂರು ಹೊರವಲಯದ ಗುರುಪುರ ಬಂಗ್ಲಗುಡ್ಡೆಯಲ್ಲಿ ರವಿವಾರದಂದು ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಇಬ್ಬರು ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಾಂತ್ವನ ಹೇಳಿದ್ದಾರೆ.   ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಅಲ್ಲದೆ, ಈ ಪ್ರದೇಶದಲ್ಲಿ ಸಿಲುಕಿಕೊಂಡಿರುವವರನ್ನು ಸುರಕ್ಷಿತ ಸ್ಥಳಾಗಳಿಗೆ ಸ್ಥಳಾಂತರ ಮಾಡುವಂತೆಯೂ ಸೂಚನೆ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ವಿಷಮ ಆದಿತ್ಯವಾರ ; ಇಂದು ಒಂದೇ ದಿನ 147 ಮಂದಿಯಲ್ಲಿ ಕೊರೊನಾ ಪಾಸಿಟಿವ್ – 38 ಮಂದಿ ಗುಣಮುಖ – ಕಹಳೆ ನ್ಯೂಸ್

ಮಂಗಳೂರು, ಜು. 05 : ದ.ಕ. ಜಿಲ್ಲೆಯಲ್ಲಿ ರವಿವಾರ ಒಂದೇ ದಿನ ಬರೋಬ್ಬರಿ 147 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 1232ಕ್ಕೆ ಏರಿಕೆಯಾಗಿದೆ. ರವಿವಾರದಂದು ಒಟ್ಟು 378 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು ಈ ಪೈಕಿ 231 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ರವಿವಾರದಂದು ಜಿಲ್ಲೆಯಲ್ಲಿ 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ 554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 666 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು:-ಬಿಲ್ಲವ ಮುಖಂಡ, ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೊರೊನಾ ಪಾಸಿಟಿವ್‌-ಕಹಳೆ ನ್ಯೂಸ್

ಮಂಗಳೂರು:- ಜಿಲ್ಲೆಯ ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೊರೊನಾ ದೃಢವಾಗಿದೆ. ಗಂಟಲ ದ್ರವದ ಮಾದರಿಯ ಪರೀಕ್ಷೆಯಲ್ಲಿ ಮಾಜಿ ಸಚಿವ ಹಾಗೂ ಅವರ ಪತ್ನಿಗೂ ಕೂಡಾ ಸೋಂಕು ಇರುವುದು ಪತ್ತೆಯಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಚಿವರಿಗೆ ಸೋಂಕು ದೃಢವಾಗಿದ್ದರೂ, ಸೋಂಕು ಸಂಬಂಧಿಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಆರೋಗ್ಯವಾಗಿದ್ದಾರೆ ಎನ್ನಲಾಗಿದೆ....
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಗುಡ್ಡ ಕುಸಿತ; ಹಲವು ಮನೆಗಳು ನೆಲಸಮ, ಮಣ್ಣಿನಡಿ ಸಿಲುಕಿರುವ ಮಕ್ಕಳಿಗಾಗಿ ರಕ್ಷಣಾ ಕಾರ್ಯಾಚರಣೆ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡ ಕುಸಿದು ಹಲವು ಮನೆಗಳು ನೆಲಸಮಕೊಂಡಿವೆ. ಇನ್ನು ಮಣ್ಣಿನಡಿಯಲ್ಲಿ ಮಕ್ಕಳಿಬ್ಬರೂ ಸಿಕ್ಕಿ ಹಾಕಿಕೊಂಡಿದ್ದು ಅವರ ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರು ಮತ್ತು ಸ್ಥಳೀಯರು ನಿರತರಾಗಿದ್ದಾರೆ. ಬಂಗ್ಲೆಗುಡ್ಡ ಕುಸಿತದಿಂದಾಗಿ ನಾಲ್ಕು ಮನೆಗಳು ನೆಲಸಮಗೊಂಡಿದ್ದು ಕೂಡಲೇ ಪೊಲೀಸರು ಮತ್ತು ಸ್ಥಳೀಯರು ಮನೆಯಲ್ಲಿದ್ದ ಹಲವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಮನೆಯಿಂದ ಹೊರಬರುವ ವೇಳೆ ಮಕ್ಕಳನ್ನು ಪೋಷಕರು ಬಿಟ್ಟು ಬಂದಿದ್ದರಿಂದ ಮಕ್ಕಳಿಬ್ಬರು ನೆಲದಡಿ ಸಿಲುಕಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ 30 ಅಡಿ...
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಗುರುಪುರ ಬಳಿ ಗುಡ್ಡ ಕುಸಿದು ಮನೆಗಳು ನೆಮಸಮ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು-ಕಹಳೆ ನ್ಯೂಸ್

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸತತ ಮಳೆಯಾಗಿದ್ದರಿಂದ ಭಾನುವಾರ ಗುಡ್ಡ ಕುಸಿದು ಮನೆಗಳು ನೆಲಸಮಗೊಂಡಿದ್ದು, ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮಂಗಳೂರಿನ ಗುರುಪುರ ಬಳಿಯ ಬಂಗ್ಲೆಗುಡ್ಡೆಯಲ್ಲಿ ಭಾನುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಹಲವು ಮನೆಗಳು ನೆಲಸಮಗೊಂಡಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿದ್ದು, ಜೆಸಿಬಿ ಮೂಲಕ ಅವಶೇಷಗಳಡಿ ಸಿಲುಕಿರುವ ಮಕ್ಕಳನ್ನು ರಕ್ಷಿಸುವ ಕೆಲಸ ಭರದಿಂದ ಸಾಗಿದೆ. ಮಣ್ಣಿನಡಿ 16 ವರ್ಷದ ಬಾಲಕ ಮತ್ತು ಮತ್ತೊಬ್ಬ ಬಾಲಕ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಚಿನ್ನಾಭರಣ ಅಂಗಡಿಗಳು ವಾರದ 6 ದಿನವೂ ತೆರೆದಿರುತ್ತದೆ ; ಸ್ಪಷ್ಟೀಕರಣ ನೀಡಿದ ಜುವೆಲ್ಲರ್ಸ್ ಅಸ್ಸೋಸ್ಸಿಯೇಶನ್ – ಕಹಳೆ ನ್ಯೂಸ್

ದ.ಕ. : ಮಂಗಳೂರು ನಗರ ಹೊರತುಪಡಿಸಿ ದ.ಕ ಜಿಲ್ಲೆಯ ಇತರ ಪಟ್ಟಣಗಳ ಚಿನ್ನಾಭರಣ ಅಂಗಡಿಗಳು ಎಂದಿನಂತೆ ವಾರದ 6 ದಿನಗಳು ತೆರೆದಿರುತ್ತದೆ. ಮಂಗಳೂರಿನಲ್ಲಿ ನಗರದಲ್ಲಿ ಕೊರೋನ ಹಬ್ಬುತ್ತಿರುವ ವೇಗದ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯ ಚಿನ್ನದ ಮಳಿಗೆಗಳು ಜುಲೈ 5 ರಿಂದ 9 ರ ವರೆಗೆ ರಜೆ ಘೋಷಿಸಿರುತ್ತರೆ. ಆದರೆ ಪುತ್ತೂರು ಬೆಳ್ತಂಗಡಿ ಸುಳ್ಯ ಮೂಡಬಿದಿರೆ ತಾಲೂಕಿನಲ್ಲಿ ಚಿನ್ನದ ಮಳಿಗೆಗಳು ಎಂದಿನಂತೆ ವ್ಯವಹಾರಕ್ಕೆ ತೆರೆದಿರುತ್ತದೆ ನಮ್ಮಎಲ್ಲಾ ಸದಸ್ಯರು ಚಿನ್ನಾಭರಣ ಅಂಗಡಿಗಳನ್ನುಹೆಚ್ಚು...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಜು. 04 : ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಲ್ಲೇ ಇದ್ದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ ಕೊರೊನಾ ಸೋಂಕು ಪಾಸಿಟಿವ್‌ ಆಗಿದೆ. ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. https://twitter.com/JainMarnad/status/1279300266454482944?s=20   ''ಕೋವಿಡ್ -19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್‌ ವರದಿ ಬಂದಿದೆ. ನಿಮ್ಮೆಲ್ಲರಾ ಆಶೀರ್ವಾದದೊಂದಿಗೆ ನಾನು ಗುಣಮುಖನಾಗುತ್ತಿದ್ದೇನೆ ಹಾಗೂ ಆಸ್ಪತ್ರೆಯಲ್ಲಿ ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದೇನೆ. ಎಲ್ಲರೂ ಸಾಮಾಜಿಕ...
1 717 718 719 720 721 724
Page 719 of 724