ಕಿಡಿಗೇಡಿಗಳಿಂದ ಎಡನೀರು ಶ್ರೀಗಳ ಕಾರು ತಡೆದು ದಾಳಿ ; ವ್ಯಾಪಕ ಖಂಡನೆ – ಕಹಳೆ ನ್ಯೂಸ್
ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ...







