ಮಡಿಕೇರಿ ಯಲ್ಲಿ ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ.- ಕಹಳೆ ನ್ಯೂಸ್
ಮಡಿಕೇರಿ: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಘಟನೆ ನ.23ರ ಶನಿವಾರ ಮಧ್ಯಾಹ್ನ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಪರಾರಿಯಾಗುವ ಸಂದರ್ಭ ಕಳ್ಳರು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು, ಪೊಲೀಸರ ಅತಿಥಿಯಾಗಿದ್ದಾರೆ. ಪಟ್ಟಣದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯಿರುವ ಶ್ರೀಕುಮಾರಲಿಂಗೇಶ್ಚರ ಹಾರ್ಡ್ ವೇರ್ ಅಂಗಡಿಯಲ್ಲಿ ಮಾಲೀಕ ತೀರ್ಥ ಹರೀಶ್ ಒಬ್ಬರೆ ಕುಳಿತ್ತಿದ್ದ ಸಂದರ್ಭದಲ್ಲಿ ಖರೀದಿಯ ನೆಪದಲ್ಲಿ ಬಂದ ಮೂವರು ಕಳ್ಳರು, ಇದ್ದಕ್ಕಿದ್ದಂತೆ ಕುತ್ತಿಗೆಯಲ್ಲಿದ್ದ ಸರವನ್ನು ಕಿತ್ತುಕೊಂಡಿದ್ದಾರೆ. ಡ್ರಾವರ್‌ನಲ್ಲಿದ್ದ...







