ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಬಿರುಗಾಳಿ, ಮಳೆ -ಕಹಳೆ ನ್ಯೂಸ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆಯವರೆಗೂ ಗಾಳಿ ಮಳೆ ಅಬ್ಬರಿಸಿದೆ. ಅಮ್ಮತ್ತಿ ಹೋಬಳಿಯ ಪುಲಿಯೇರಿ ಗ್ರಾಮದ ಶ್ರೀಜಾ ಎಂಬುವವರ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ. ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಸೋಮವಾರಪೇಟೆ ಹೋಬಳಿ ಹರದೂರು ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾಗಿದೆ. ಕಟ್ಟಡದ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರದ ಶೌಚಾಲಯ ಕಟ್ಟಡವು...







