ನಾಳೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ – ಕಹಳೆ ನ್ಯೂಸ್
ಬೆಳ್ತಂಗಡಿ - ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ನಾಳೆ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನೆರವೇರಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು. ಸಭಾ ಕಾರ್ಯಕ್ರಮ: ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗ ಮಠದ...







