ಚಾಮುಂಡಿಬೆಟ್ಟಕ್ಕೆ ನಟ ರಿಷಬ್ ಶೆಟ್ಟಿ ಭೇಟಿ; ಕಾಂತಾರ ಯಶಸ್ಸನ್ನು ಕನ್ನಡಿಗರಿಗೆ ಅರ್ಪಿಸಿದ ರಿಷಬ್ – ಕಹಳೆ ನ್ಯೂಸ್
ಮೈಸೂರು: ಕಾಂತಾರ ಚಾಪ್ಟರ್.1 ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಯ ದರ್ಶನ ಪಡೆದರು. ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ ಅವರು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಬುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ...







