ಅ 13 ಕ್ಕೆ ಅಂಬಿಕಾ ಆವರಣಕ್ಕೆ ಆಚಾರ್ಯ ಕೆ.ಆರ್.ಮನೋಜ್ ಜಿ ಆಗಮನ ; ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ನೂತನ ಅಂತಸ್ತು, ವ್ಯಾಯಾಮಶಾಲೆ, ಸಭಾಂಗಣದ ಉದ್ಘಾಟನೆ – ಕಹಳೆ ನ್ಯೂಸ್
ಪುತ್ತೂರು:ಮತಾಂತರಗೊಂಡಿದ್ದ ಸುಮಾರು ಎಂಟುಸಾವಿರಕ್ಕೂ ಅಧಿಕ ಹಿಂದೂ ಯುವಕ ಯುವತಿಯರನ್ನು ಮರಳಿ ಮಾತೃಧರ್ಮಕ್ಕೆ ಕರೆತರುವ ಮೂಲಕ ಕೇರಳದ ತಿರುವನಂತಪುರಂನಲ್ಲಿ ಕ್ರಾಂತಿ ಮೂಡಿಸಿರುವ ಆರ್ಷ ವಿದ್ಯಾ ಸಮಾಜದ ಸಂಸ್ಥಾಪಕ ಆಚಾರ್ಯ ಕೆ.ಆರ್.ಮನೋಜ್ ಜಿ ಅಕ್ಟೋಬರ್ 13ರಂದು ಪುತ್ತೂರಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಕ್ಕೆ ಆಗಮಿಸಲಿದ್ದಾರೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಗೆ ಇಪ್ಪತ್ತೈದು ವರ್ಷ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ವಿದ್ಯಾಲಯಕ್ಕೆ ಹತ್ತು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರೂಪಿಸಲಾಗಿರುವ...







