Recent Posts

Sunday, April 26, 2026

ಜಿಲ್ಲೆ

ಜಿಲ್ಲೆಮಂಗಳೂರುಸುದ್ದಿ

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌ -ಕಹಳೆ ನ್ಯೂಸ್

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ (New Mangalore Port) ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ (LPG) ಇರುವ ಅಪೋಲೋ ಓಷನ್(Apollo Ocean) ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದ್ದು ಇಳಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ. ಕತಾರಿನ ರಾಸ್ ಲಫಾನ್‌ನಿಂದ 46 ಸಾವಿರ ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್ ಸರಕು ಹಡಗು ಗುಜರಾತಿನ ಮುದ್ರಾ ಬಂದರಿಗೆ ಮಾ.16ಕ್ಕೆ ಬಂದಿತ್ತು. ಈ ಹಡಗು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿ ಕ್ಷೇತ್ರದಲ್ಲಿ ಮಾ.26 ರಿಂದ ಏ.2 ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿ ಕ್ಷೇತ್ರದಲ್ಲಿ ಮಾ.26 ರಿಂದ ಏ.2 ರ ತನಕ ವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿರುವುದು. ಮಾ.26 ರಂದು ಬೆಳಿಗ್ಗೆ 10.ಕ್ಕೆ ಸಾರಿ ಹಾಕುವುದು ಅದೇ ದಿನ ರಾತ್ರಿ ದೊಂಪದಬಲಿ ನೇಮೋತ್ಸವ ನಡೆಯಲಿದೆ. ಮಾ.29 ರಂದು ರಾತ್ರಿ ಕಜೆಕಾರುಗುತ್ತಿನಿಂದ ಶ್ರೀ ರಾಜನ್ ದೈವ ಕೊಡಮಾಣಿತ್ತಾಯ ಮತ್ತು ಪಟ್ರಾಡಿ ತಾವಿನಿಂದ ಶ್ರೀ ಬ್ರಹ್ಮಬೈದೆರೆ ಭಂಡಾರ ಬಂದು ಬಲಿ ಉತ್ಸವ ನಡೆಯಲಿದೆ. ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ...
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ -ಕಹಳೆ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬಿ ಸಮುದ್ರದಲ್ಲಿ ಗಾಳಿ ಒತ್ತಡ ಇರುವುದರಿಂದ ವಿವಿಧೆಡೆ ಗಾಳಿ ಮತ್ತು ಸಿಡಿಲಿನ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ಮಂಗಳವಾರ 33.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ...
ಜಿಲ್ಲೆಸುದ್ದಿ

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಸಹೋದರರು ಸಾವು :ತಂದೆ ಕಣ್ಣೆದುರೇ ನಡೆದ ದುರಂತ – ಕಹಳೆ ನ್ಯೂಸ್

ದಾವಣಗೆರೆ: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಘಟನೆ ನಡೆದಿದೆ. ಮನು (19) ಹಾಗೂ ಪ್ರಜ್ವಲ್ (18) ಮೃತ ಸಹೋದರರು. ತಂದೆಯ ಕಣ್ಣೆದುರಲ್ಲೇ ಅಣ್ಣ-ತಮ್ಮ ಪ್ರಾಣ ಬಿಟ್ಟಿದ್ದಾರೆ. ತಂದೆಯೊಂದಿಗೆ ತುಂಗಭದ್ರಾ ನದಿಗೆ ಮೂವರು ಸಹೋದರರು ಈಜಲು ತೆರಳಿದ್ದರು. ಇಬ್ಬರು ಸಹೋದರರು ಆಯತಪ್ಪಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ತಂದೆ ಮಂಜಪ್ಪ ಅವರ ಸಮಯ ಪ್ರಜ್ಞೆಯಿಂದ ಕೊನೆಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ -ಕಹಳೆ ನ್ಯೂಸ್

ಬೆಂಗಳೂರು: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ. ನಿಶಿಕಾ (4) ಮೃತ ಬಾಲಕಿ. ಯುಗಾದಿ ಹಬ್ಬ ಮುಗಿಸಿ ತಾಯಿ-ಮಗಳು ದೇವರ ದರ್ಶನಕ್ಕೆಂದು ದೇವಸ್ಥಾನಕ್ಕೆ ತೆರಳುತ್ತಿದ್ದರು. ಎರಡನೇ ಮಗು ಕಂಕುಳಲ್ಲಿ ಹಾಗೂ ಮೊದಲ ಮಗುವಿನ ಕೈ ಹಿಡಿದು ತೆರಳುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿ ಏಕಾಏಕಿ ಮಗುವಿನ ಮೇಲೆ ಹರಿದಿದೆ. ಅಪಘಾತದ...
ಕೇರಳಜಿಲ್ಲೆಸುದ್ದಿ

ವೈದ್ಯೆಯನ್ನು 27 ಬಾರಿ ಇರಿದು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ :ಕೊಲ್ಲಂ ಕೋರ್ಟ್ ಆದೇಶ -ಕಹಳೆ ನ್ಯೂಸ್

ತಿರುವನಂತಪುರಂ: ವೈದ್ಯೆಯನ್ನು 27 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ಅಪರಾಧಿಗೆ ಕೊಲ್ಲಂ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್  ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣ ಸಂಬಂಧ ಇಂದು (ಮಾ.21)ವಿಚಾರಣೆ ನಡೆಸಿದ ಕೊಲ್ಲಂ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಅಪರಾಧಿ ಜಿ. ಸಂದೀಪ್‌ಗೆ 30 ವರ್ಷಗಳ ಜೈಲು ಶಿಕ್ಷೆ ನೀಡಿದೆ. ಈ ಅವಧಿ ಮುಗಿದ ಬಳಿಕ ಜೀವಾವಧಿ ಶಿಕ್ಷೆ ಆರಂಭವಾಗುತ್ತದೆ ಎಂದು ತಿಳಿಸಿದೆ. ವಿಶೇಷ...
ಜಿಲ್ಲೆಸುದ್ದಿಹಾಸನ

ಜೂಜಾಡುವ ವೇಳೆ ಪೊಲೀಸರ ದಾಳಿ : ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು -ಕಹಳೆ ನ್ಯೂಸ್

ಹಾಸನ: ಜೂಜಾಡುವ ವೇಳೆ ಪೊಲೀಸರು ದಾಳಿ ನಡೆಸಿದ್ದು, ಪೊಲೀಸರಿಂದ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (34) ಮೃತಪಟ್ಟ ವ್ಯಕ್ತಿ. ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಪಕ್ಕದ ತಾವರೆಹಳ್ಳಿ ನಿರ್ಜನ ಪ್ರದೇಶದಲ್ಲಿ ಯುವಕರ ಗುಂಪು ಜೂಜಾಡುತ್ತಿದ್ದರು. ಜೂಜಾಟದ ವಿಷಯ ತಿಳಿದು ಜಾವಗಲ್ ಪೊಲೀಸರು ದಾಳಿ‌ ಮಾಡಿದ್ದಾರೆ. ಈ ವೇಳೆ ಸ್ಥಳದಿಂದ‌ ತಪ್ಪಿಸಿಕೊಳ್ಳಲು‌ ಜೂಜಾಡುತ್ತಿದ್ದ ಯುವಕರು ಓಡಿದ್ದಾರೆ. ಮೂರ್ಛೆ ರೋಗದಿಂದ...
ಜಿಲ್ಲೆರಾಜ್ಯಸುದ್ದಿ

ಹಾರ್ಮುಜ್‌ ಜಲಸಂಧಿ ದಾಟಲು ಇರಾನ್‌ ಸಮ್ಮತಿ : ಭಾರತಕ್ಕೆ ಬರಲಿವೆ ಇನ್ನೆರಡು LPG ಟ್ಯಾಂಕರ್‌ -ಕಹಳೆ ನ್ಯೂಸ್

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ತಯಾರಿ ನಡೆಸುತ್ತಿವೆ ಎಂದು ವರದಿಯಾಗಿದೆ. ಹಾರ್ಮುಜ್ ಜಲಸಂಧಿಯು ಪರ್ಷಿಯನ್ ಕೊಲ್ಲಿ ಮತ್ತು ಓಮನ್ ಕೊಲ್ಲಿಯ ನಡುವಿನ ಕಾರ್ಯತಂತ್ರದ ಕಿರಿದಾದ ಸಮುದ್ರ ಮಾರ್ಗ. ವಿಶ್ವದ ಕಚ್ಚಾ ತೈಲ ಪೂರೈಕೆಯ ಸುಮಾರು 20-25% ಇದರ ಮೂಲಕ ಹಾದುಹೋಗುತ್ತದೆ. ಫೆಬ್ರವರಿ 28 ರಂದು ಯುದ್ಧ ಪ್ರಾರಂಭವಾದಾಗಿನಿಂದ ಇರಾನ್ ಮತ್ತು ಓಮನ್...
1 10 11 12 13 14 956
Page 12 of 956