ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ; ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ -ಕಹಳೆ ನ್ಯೂಸ್
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಹಿಂದೆ ಷಡ್ಯಂತ್ರ ನಡೆದಿದ್ದು, ಇದರ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಕುಂಪಲ, 'ಧರ್ಮಸ್ಥಳ ಕ್ಷೇತ್ರದ ಹೆಸರನ್ನು ಕೆಡಿಸಲು ಮಾಡಿರುವ ಷಡ್ಯಂತ್ರವು ರಾಷ್ಟ್ರೀಯ ಸುರಕ್ಷತೆಗೂ ಧಕ್ಕೆ...







