Thursday, May 14, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಕೋರ್ಟ್ ಗೆ ದರ್ಶನ್ & ಗ್ಯಾಂಗ್ ಹಾಜರು.-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಆರೋಪಿ ನಟ ದರ್ಶನ್ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಮತ್ತಿತರರು ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ದರ್ಶನ್ ಮತ್ತು ಆರೋಪಿಗಳು ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಲಿದ್ದಾರೆ....
ಜಿಲ್ಲೆದೆಹಲಿರಾಜ್ಯಸುದ್ದಿ

ರಾಜ್ಯದಲ್ಲಿ ’ಆಯುಷ್ಮಾನ್ ಭಾರತ್ ’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಸಂಸದ ಕ್ಯಾ. ಚೌಟ ಕಳವಳ -ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿರುವ ಸಂಸದರು,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ಸಹಾಯಧನ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ 5 ಲಕ್ಷ ರೂಪಾಯಿ ಮಂಜುರಾಗಿದ್ದು, ಸೋಮವಾರ ನರಹರಿ ಪರ್ವತ ಸದಾಶಿವ ದೇವಸ್ಥಾನ ದ ಜೀರ್ಣೋದ್ಧರ ಸಮಿತಿಗೆ ಹಸ್ತಾಂತರ ಮಾಡಲಾಯಿತು. ಸಹಾಯಧನ ಹಸ್ತಾಂತರ ಮಾಡಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಧರ್ಮಸ್ಥಳದಿಂದ ಎಲ್ಲಾ ಕ್ಷೇತ್ರಗಳಿಗೂ ಸಹಾಯಧನ ನೀಡಲಾಗುತ್ತಿದ್ದು ಅದರಂತೆ ನರಹರಿ ಪರ್ವತಕ್ಕೂ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ *”ಸಹ್ಯಾದ್ರಿ ಸಿರಿ” ಪ್ರಶಸ್ತಿ” – ಕಹಳೆ ನ್ಯೂಸ್

ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ "ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ" ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ, ವಿಟಿವಿ ನ್ಯೂಸ್ ಚಾನೆಲ್ ನ ಆಡಳಿತ ನಿರ್ದೇಶಕರಾದ ರಾಮ್‌ದಾಸ್‌ ಶೆಟ್ಟಿಯವರಿಗೆ ಹಲವು ಗಣ್ಯರ ಸಮ್ಮುಖದಲ್ಲಿ "ಸಹ್ಯಾದ್ರಿ ಸಿರಿ" ಪ್ರಶಸ್ತಿ-2025" ನೀಡಿ ಗೌರವಿಸಲಾಯಿತು. ಸಮಾಜದಲ್ಲಿ ಯುವಕರಿಗೆ ಪ್ರೇರಣೆ ನೀಡುತ್ತಾ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಠಾಣೆಯಲ್ಲಿ ‘ಕುಡ್ಲಾ ರಾಂ ಪೇಜ್’ ನ ಯೂಟ್ಯೂಬರ್‌ ಹಾಗೂ ಇತರ ಇಬ್ಬರ ವಿರುದ್ಧ FIR – ಕಹಳೆ ನ್ಯೂಸ್

ಬೆಳ್ತಂಗಡಿ, ಆ. 11: ವಿಡಿಯೊ ಚಿತ್ರೀಕರಣದ ವಿಚಾರವಾಗಿ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ, ಯೂಟ್ಯೂಬರ್ ಒಬ್ಬರು ಹಾಗೂ ಆತನ ಇಬ್ಬರು ಸಹಚರರು ಸೇರಿ ಸ್ಥಳೀಯ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಉಜಿರೆ ನಿವಾಸಿ ಹರೀಶ್ ನಾಯ್ಕ (16) ಹಲ್ಲೆಗೊಳಗಾದವರು. ಅಗಸ್ಟ್ 6 ರಂದು ಪ್ರಕರಣ ದಾಖಲಾಗಿದೆ. ಈ ಸಂಬಂಧ, ಕುಡ್ತಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್‌ನ ಯೂಟ್ಯೂಬರ್ ಹಾಗೂ...
ಕ್ರೈಮ್ಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಗಿರೀಶ್ ಮಟ್ಟಣ್ಣನವ‌ರ್, ಯೂಟ್ಯೂಬರ್ ಸಮೀರ್ FIR ದಾಖಲು – ಕಹಳೆ ನ್ಯೂಸ್

ಹುಬ್ಬಳ್ಳಿ:- ಜೈನ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಗಿರೀಶ ಮಟ್ಟಣ್ಣವ‌ರ್ ಹಾಗೂ ಅದರ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. FIR no: 01/2025 00: 299, 196(1)(໖) ໖. ಎನ್.ಎಸ್ 2023 ಅಡಿ ಪ್ರಕರಣ ದಾಖಲಾಗಿದೆ. ಜೈನ್ ಸಮಾಜದ ಮುಖಂಡ ಅಜೀರ್ ಬಸಾಪುರ ಅವರಿಂದ ದೂರು ದಾಖಲಿಸಲಾಗಿದೆ. ಗಿರೀಶ್ ಮಟ್ಟೆಣ್ಣವರ ಜೈನ್ ಧರ್ಮದ ಬಗ್ಗೆ ಅವಹೇಳನಕಾರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಗೆ ನಾಳೆ ‘ಪ್ರಧಾನಿ ಮೋದಿ’ ಭೇಟಿ : ನಗರದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.-ಕಹಳೆ ನ್ಯೂಸ್

ಬೆಂಗಳೂರು : ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಆಗಸ್ಟ್ 10, 2025 ರ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲು ಮತ್ತು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಲು ಭೇಟಿ ನೀಡುತ್ತಿರುವುದರಿಂದ ಉದ್ಯಾನ ನಗರಿಯು ಪ್ರಮುಖ ಸಂಚಾರ ಬದಲಾವಣೆಯಾಗಲಿದ್ದು ಪಾರ್ಕಿಂಗ್ ನಿಷೇಧಿಸಲಾಗಿದೆ. ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 12:00 ರವರೆಗೆ: ಮಾರೇನಹಳ್ಳಿ ಮುಖ್ಯ...
ಜಿಲ್ಲೆಶಿವಮೊಗ್ಗಸುದ್ದಿ

ಅಪಘಾತದಲ್ಲಿ ಸಾಗರದ ಯೋಧ ಪ್ರಜ್ವಲ್ ದುರ್ಮರಣ: ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಕೆ -ಕಹಳೆ ನ್ಯೂಸ್

ಶಿವಮೊಗ್ಗ: ಚಾಮರಾಜನಗರ ತಾಲೂಕಿನ ಕಮರವಾಡಿ ಗೇಟ್ ಬಳಿ ಬೈಕ್‌ಗಳ ನಡುವೆ ಗುರುವಾರದಂದು ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸಾಗರದ ಉಳ್ಳೂರಿನ ಅಗ್ನಿವೀರ ಯೋಧ ಪ್ರಜ್ವಲ್ 21 ಮೃತಪಟ್ಟಿದ್ದರು. ಅವರ ಪಾರ್ಥೀವ ಶರೀರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಂತಿಮ ನಮನ ಸಲ್ಲಿಸಿದರು. ತಂದೆ ರಾಮಚಂದ್ರ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿಗಳೆಮನೆ ಗ್ರಾಮದವರು. ಪ್ರಸ್ತುತ ಚಾಮರಾಜನಗರದ ಸೇವಾಭಾರತಿ ಶಾಲೆ ಶಿಕ್ಷಕ ರಾಮಚಂದ್ರ ಅವರ ಪುತ್ರ...
1 161 162 163 164 165 967
Page 163 of 967