ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟ – ಕಹಳೆ ನ್ಯೂಸ್
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ.ಕೆ ಆರ್ ನಗರದ ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಗಜಾನನ ಭಟ್ ಅವರು ಈ ಆದೇಶ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಮತ್ತು 376(2)(k) ಅಡಿಯಲ್ಲಿ ಆರೋಪಗಳು ದಾಖಲಾಗಿದೆ. ಈ ಕಲಂಗಳು...







