ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ -ಕಹಳೆ ನ್ಯೂಸ್
ಕಲ್ಲಡ್ಕ : ಆ.12. ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ “ನಮ್ಮ ಜೀವನದ ಶೈಲಿ ಚೆನ್ನಾಗಿರಬೇಕು. ಇಡೀ ರಾಜ್ಯದಲ್ಲಿ ಶ್ರೀರಾಮದ ಮಕ್ಕಳು ಎಂಬ ಹೆಮ್ಮೆಯಿದೆ. ಮಕ್ಕಳ ಹಿತ ದೃಷ್ಟಿಯಿಂದ ಮಕ್ಕಳ ದಿಕ್ಕಿನಲ್ಲಿ ಯೋಚನೆ ಮಾಡಿ. ಮಕ್ಕಳ ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ. ಪೋಷಕರು...







