ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ : ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿ.ವೈ.ವಿಜಯೇಂದ್ರ – ಕಹಳೆ ನ್ಯೂಸ್
ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿಯನ್ನು ಬೆಂಗಳೂರಿನ ಅರಮನೆ ಮೈದಾನದ `ಗಾಯತ್ರಿ ಗ್ರ‍್ಯಾಂಡ್’ನಲ್ಲಿ ಇದೇ 19ರಂದು ಆಯೋಜಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಕೆಲವು ಸಂಘಟನಾತ್ಮಕ ವಿಚಾರಗಳನ್ನು ಚರ್ಚಿಸಲಿದ್ದೇವೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು, ಜಿಬಿಎ ಚುನಾವಣೆ, ಉಪ ಚುನಾವಣೆಗಳು, ಎಂಎಲ್‌ಸಿ ಚುನಾವಣೆಗಳು, ರಾಜ್ಯ ಸರ್ಕಾರದ ವೈಫಲ್ಯಗಳು, ಕೇಂದ್ರ ಸರ್ಕಾರದ ಸಾಧನೆ ಇವೆಲ್ಲವನ್ನೂ ಸಮಗ್ರವಾಗಿ ಚರ್ಚಿಸಲಿದ್ದೇವೆ...





