Sunday, September 6, 2026

ಜಿಲ್ಲೆ

ಚಿಕ್ಕಮಂಗಳೂರುಜಿಲ್ಲೆಸುದ್ದಿ

ಈದ್ ಮಿಲಾದ್‌ಗೆ 40 ಅಡಿ‌ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಸಿ ರೀಲ್ಸ್‌ : ಎಫ್‌ಐಆರ್‌ ದಾಖಲು – ಕಹಳೆ ನ್ಯೂಸ್

ಚಿಕ್ಕಮಗಳೂರು: ಈದ್ ಮಿಲಾದ್  ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದಾರೆ. ಈ ಕಟೌಟ್‌ನ್ನು ವಿಡಿಯೋ ಮಾಡಿ ಅದಕ್ಕೆ ಪಾಕ್‌ ಸೇನೆ ಮುಜಾಹಿದ್‌ ಹಾಡು ಬಳಸಿ ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋವನ್ನು ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಎಂಬ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಮುಸ್ಲಿಂ ಯುವಕರು ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ  ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನಾ ಕಾರ್ಯಕ್ರಮ  ನೆರವೇರಿತು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಂಸ್ಥಾಪಕರು,ವ್ಯವಸ್ಥಾಪಕ ಟ್ರಸ್ಟಿ ಹಾಗೂ ವಿವೇಕಾನಂದ ತಾಂತ್ರಿಕ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ|ಶ್ರೀಶ ಭಟ್ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಕೃತಕ ಬುದ್ಧಿಮತ್ತೆ ವೇಗವಾಗಿ ಬೆಳೆಯುತ್ತಿರುವ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಅದಕ್ಕೆ ಹೊಂದಿಕೊಳ್ಳುವುದರ ಜೊತೆಗೆ ತಮ್ಮದೇ ಆದ ಸೃಜನಶೀಲತೆ, ಕೌಶಲ್ಯ, ತಾರ್ಕಿಕ ಚಿಂತನೆ ಮತ್ತು ಸಮಸ್ಯೆ ಪರಿಹರಿಸುವ...
ಜಿಲ್ಲೆಬೆಂಗಳೂರುಶಿವಮೊಗ್ಗಸುದ್ದಿ

ಬೆಂಗಳೂರು | ಪಾಗಲ್‌ ಪ್ರೇಮಿಯಿಂದ ಟಾರ್ಚರ್‌ : ಕೆರೆಗೆ ಹಾರಿ ಸಾಗರದ ಯುವತಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಪಾಗಲ್‌ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಸಾಗರ ತಾಲೂಕಿನ ಬೆಳಮಕ್ಕಿ ಗ್ರಾಮದ ಯುವತಿಯೊಬ್ಬಳು ಬೆಂಗಳೂರಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಾಣಿ (22 )ಆತ್ಮಹತ್ಯೆಗೆ ಶರಣಾದ ಯುವತಿ. ಹೆಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಅಗರ ಕೆರೆಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾಳೆ. ಅದರಲ್ಲಿ ಕ್ಲಾಸ್‌ಮೇಟ್‌ ಅಭಿಷೇಕ್ ಎಂಬಾತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ತಿಳಿಸಿದ್ದಾಳೆ. ಅಭಿಷೇಕ್‌, ಯುವತಿಗೆ ವಾಟ್ಸಪ್‌ನಲ್ಲಿ ವಿಡಿಯೋ, ಫೋಟೋಸ್ ಕಳುಹಿಸಿ ಬ್ಲಾಕ್‌ಮೇಲ್‌ ಮಾಡುತಿದ್ದ. ಕರೆದಾಗಲೆಲ್ಲ...
ಜಿಲ್ಲೆಸುದ್ದಿ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕು: ಬೊಮ್ಮಾಯಿ -ಕಹಳೆ ನ್ಯೂಸ್

ಹಾವೇರಿ: ಶಿಗ್ಗಾವಿಯ ಹನುಮಾನ್ ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿ ಪ್ರಜ್ಞಾಪೂರ್ವಕವಾಗಿ ಮೂತ್ರ ವಿಸರ್ಜನೆ ಮಾಡಿದ್ದು, ಅವನು ಕೋಮು ಗಲಭೆ ಸೃಷ್ಟಿಸುವ ಕೆಲಸ ಮಾಡಿದ್ದಾನೆ. ಪೊಲೀಸರು ಅವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಈ ಹಿನ್ನೆಲೆಯಲ್ಲಿ ಶಿಗ್ಗಾವಿ ಬಂದ್‌ಗೆ ಎಲ್ಲ ಕೋಮಿನವರೂ ಬೆಂಬಲ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಮನವಿ ಮಾಡಿದರು. ಆಗಸ್ಟ್ 21ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡ್‌ನಲ್ಲಿರುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದರ್ಶನ್‌ಗೆ ಮಾಫಿ ಸಾಕ್ಷಿ ಸಂಕಷ್ಟ : ದೈವದ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ – ಕಹಳೆ ನ್ಯೂಸ್

ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ವಿರುದ್ಧ ಮಾಫಿ ಸಾಕ್ಷಿ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ದರ್ಶನ್ ಪತ್ನಿ ವಿಜಯಲಕ್ಷ್ಮಿ  ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ. ದರ್ಶನ್‌ಗೆ (Darshan) ಪ್ರದೋಷ್‌ ಮಾಫಿ ಸಾಕ್ಷಿ ಕಂಟಕವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ದೈವದ ಸನ್ನಿಧಿಯಲ್ಲಿ...
ಜಿಲ್ಲೆಸುದ್ದಿ

KKRTC ಬಸ್‌ನಲ್ಲಿ ವಿದ್ಯಾರ್ಥಿಯಿಂದ ಟಿಕೆಟ್ ವಿತರಣೆ : ಚಾಲಕ-ಕಂ-ಕಂಡಕ್ಟರ್‌ ಅಮಾನತು – ಕಹಳೆ ನ್ಯೂಸ್

ಕಲಬುರಗಿ: ಕೆಕೆಆರ್‌ಟಿಸಿ ಬಸ್‌ನಲ್ಲಿ  ಪ್ರಯಾಣಿಕರಿಗೆ ವಿದ್ಯಾರ್ಥಿ ಮೂಲಕ ಟಿಕೆಟ್ ವಿತರಿಸಿದ ಪ್ರಕರಣ ಸಂಬಂಧ, ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಕಂಡಕ್ಟರ್‌ನನ್ನ ಅಮಾನತುಗೊಳಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿ  ವಿಭಾಗ-1ರ ವ್ಯಾಪ್ತಿಯ ಕಾಳಗಿ ಘಟಕದ ಚಾಲಕ-ಕಂ-ನಿರ್ವಾಹಕ ಸಿದ್ದಪ್ಪನನ್ನು ಅಮಾನತುಗೊಳಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿದ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಜಿ ಗಂಗಾಧರ, ಕಳೆದ ಆಗಸ್ಟ್ 18 ರಂದು ಕಾಳಗಿ-ಕಲಬುರಗಿ-ಮಂಗಲಗಿ ಮಾರ್ಗದ KA-32 F-2066...
ಜಿಲ್ಲೆಸುದ್ದಿ

ರಾಜಸ್ಥಾನ ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ ಸಿಜೆಪಿ ನಾಯಕರಿಗೆ ಥಳಿತ – ಹೊಡೆದು ಬೆನ್ನಟ್ಟಿ ಓಡಿಸಿದ ಗ್ರಾಮಸ್ಥರು – ಕಹಳೆ ನ್ಯೂಸ್

ಜೈಪುರ: ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರು ಮತ್ತು ಸದಸ್ಯರ ಮೇಲೆ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿ ಬೆನ್ನಟ್ಟಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ ಜಿಲ್ಲೆಯ ಬಗ್ರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮ್‌ಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ  ಪರಿಶೀಲನೆಗೆ ಇಂದು ಸಿಜೆಪಿ ಸಹ-ಸಂಸ್ಥಾಪಕ ಅಶುತೋಷ್ ರಾಂಕಾ ನೇತೃತ್ವದ ತಂಡ ಆಗಮಿಸಿತ್ತು. ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಲು ಮುಂದಾದಾಗ ಈ ದಾಳಿ...
ಉಡುಪಿಜಿಲ್ಲೆಸುದ್ದಿ

ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಕೇಸ್ : ಉತ್ತರಾಖಂಡ್‌ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ -ಕಹಳೆ ನ್ಯೂಸ್

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೂರಜ್ (31) ಬಂಧಿತ ಆರೋಪಿ. ಉತ್ತರಾಖಂಡ್‌ನ ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ಬಳಿ ವಿಶೇಷ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಂಡಿದ್ದ ಸೂರಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಶೂಟೌಟ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಸೂರಜ್‌ ವಿರುದ್ಧ ಈ ಪ್ರಕರಣದಲ್ಲಿ ಒಳಸಂಚು ರೂಪಿಸಿ, ಹಣಕಾಸು ಪೂರೈಕೆ ಮಾಡಿದ್ದ ಆರೋಪ ಇದೆ. ಈಗಾಗಲೇ ಬಂಧಿತರಾಗಿರುವ...
1 2 3 4 5 6 1,012
Page 4 of 1012