Monday, April 27, 2026

ಜಿಲ್ಲೆ

ಉಡುಪಿರಾಜಕೀಯಸುದ್ದಿ

“ಎಂತೋಳ್ ಅವಳ್” ಎಂದು ಸೋನಿಯಾ ಗಾಂಧಿ ಅವರಿಗೂ ಕೇಳುವ ದಮ್ ತಾಕತ್ತು ಇದೆಯಾ ನಿಮಗೆ ಮುಖ್ಯಮಂತ್ರಿಗಳೇ? : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಪ್ರಶ್ನೆ-ಕಹಳೆನ್ಯೂಸ್

ರಾಜ್ಯದ ಮುಖ್ಯಮಂತ್ರಿಯಾಗಿ ಮಹಿಳೆಯರಿಗೆ ಯಾವ ರೀತಿ ಗೌರವ ನೀಡಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಸಿ.ಎಂ. ಸಿದ್ದರಾಮಯ್ಯ ಅವರ ಉದ್ದಟತನದ ವರ್ತನೆ ಎಲ್ಲೆ ಮೀರಿದೆ. ಪತ್ರಿಕಾ ಗೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡುವಾಗ ದೇಶ ಕಂಡ ಚಾಣಾಕ್ಷ ಮತ್ತು ಗೌರವಾನ್ವಿತ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಏಕ ವಚನದಲ್ಲಿ ಮಾತನಾಡಿ, 'ಎಂತೋಳ್ ಅವಳ್' ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೂ ಏಕ ವಚನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಮತ್ತು ಪ್ರಜ್ವಲ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಅಶ್ವಿನಿ ಪರುವಾಯಿ, ಜತೆ ಕಾರ್ಯದರ್ಶಿಯಾಗಿ ಸುಮನ ಕೇಪು ಆಯ್ಕೆ-ಕಹಳೆನ್ಯೂಸ್

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್‌ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸುಳ್ಯ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿಸುಳ್ಯ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಈಶ್ವರ ವಾರಣಾಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಪ್ರಕಾಶ್ ಪುಣಚ ಆಯ್ಕೆ-ಕಹಳೆನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್‌ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಮಂಗಳೂರುಯಕ್ಷಗಾನ / ಕಲೆಸುದ್ದಿ

ಡಿ.10ರಂದು ಮಂಗಳೂರಿನ ಪುರಭವನದಲ್ಲಿ ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ‘ಬ್ರಹ್ಮರಕ್ಕಸ’ ವಿನೂತನ ನಾಟಕ -ಕಹಳೆ ನ್ಯೂಸ್

ಮಂಗಳೂರು : ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ಅನಾವರಣಗೊಳ್ಳಲಿದೆ. ತ್ರಿನೇತ್ರ ಕಲಾವಿದರು ಕುಡ್ಲ ಅಭಿನಯಿಸುವ 'ಬ್ರಹ್ಮರಕ್ಕಸ' ವಿನೂತನ ನಾಟಕ ಜನಮನ ರಂಜಿಸಲು ಬರುತ್ತಿದೆ. ಅದ್ದೂರಿ ರಂಗ ವಿನ್ಯಾಸದ ಎಲ್‌ಇಡಿ ಹೊಸ ತಂತ್ರಜ್ಞಾನದ ತುಳು ನಾಟಕ ಇದಾಗಿದ್ದು, ಡಿಸೆಂಬರ್ 10 ರಂದು ಬುಧವಾರ 6 ಗಂಟೆಗೆ ಮಂಗಳೂರು ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ. ಈ ನಾಟಕಕ್ಕೆ ನರೇಶ್ ಕುಮಾರ್ ಸಸಿಹಿತ್ತು ಕಥೆ, ಸಂಭಾಷಣೆ, ಸಾಹಿತ್ಯ, ಪರಿಕಲ್ಪನೆ,...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ರಾಜ್ಯ ಮಟ್ಟದ ಬಾಲ್‌ ಬ್ಯಾಡ್ಮಿಂಟನ್: ಆಳ್ವಾಸ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ-ಕಹಳೆನ್ಯೂಸ್

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪಿಯು) ಹಾಸನ ಹಾಗೂ ಎಚ್‌ಎಸ್‌ಕೆ ಪಿಯು ಕಾಲೇಜಿನ ಆಶ್ರಯದಲ್ಲಿ ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು. ಬಾಲಕರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಪತ್ರ-ಕಹಳೆನ್ಯೂಸ್

ಬಂದಾರು : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ. 09 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಅಶೋಕ್ ತಾಯಿ ಕುಸುಮ, ಪತ್ನಿ ಚೇತನ ಮತ್ತು ಮಕ್ಕಳು,ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹೈಕೋರ್ಟ್ ನಿರ್ದೇಶನ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮರು ರಚನೆ: ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್, ಹಳೇ ಸದಸ್ಯರೇ ಮತ್ತೆ ಮೂರು ವರ್ಷಗಳ ಅವಧಿಗೆ ಪುನರಾಯ್ಕೆ -ಕಹಳೆನ್ಯೂಸ್

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಧಾರ್ಮಿಕ ಪರಿಷತ್ ಹೊಸ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿದ್ದು, ಹಾಲಿ ಸಮಿತಿಯವರೇ ಮತ್ತೆ ಆಯ್ಕೆಯಾಗಿದ್ದಾರೆ. ಈಶ್ವರ ಭಟ್ ಪಂಜಿಗುಡ್ಡೆ ಅವರು ಸಮಿತಿಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಹೈಕೋರ್ಟ್ ಆದೇಶದ ಹಿನ್ನೆಲೆ: ಈ ಹಿಂದಿನ ಸಮಿತಿ ರಚನೆ ಕ್ರಮಬದ್ಧವಾಗಿಲ್ಲ ಎಂದು ಬನ್ನೂರು ಗ್ರಾಮದ ವಸಂತಿ ಯಾನೆ ವಸಂತಲಕ್ಷ್ಮೀ ಎಂಬುವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸಮಿತಿ ರಚನೆಯಲ್ಲಿನ ತಾಂತ್ರಿಕ ಕಾರಣಗಳನ್ನು ಪರಿಗಣಿಸಿದ ಹೈಕೋರ್ಟ್,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ‘ಸ್ವಸ್ತಿ ಸಿರಿ’ ಪ್ರಶಸ್ತಿ ಪ್ರದಾನ-ಕಹಳೆನ್ಯೂಸ್

‌ಬಂಟ್ವಾಳ: ಗ್ರಾಮೀಣ ಕ್ರೀಡೆ ಕಬಡ್ಡಿಗೆ ವಿಶ್ವಮಾನ್ಯತೆ ದೊರೆತಿದ್ದು, ಯುವಜನತೆ ನಿಯಮಿತ ವ್ಯಾಯಾಮ ಮತ್ತು ಆಹಾರ ಸೇವನೆ ಮೂಲಕ ಆರೋಗ್ಯ ಕಾಯ್ದುಕೊಂಡಾಗ ಸಾಧನೆಯ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶ ದಿನೇಶ್ ಹೆಗ್ಡೆ ಬದ್ಯಾರು ಹೇಳಿದರು. ಇಲ್ಲಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಭಾನುವಾರ ಸಮಾಪನಗೊಂಡ 41ನೇ ವರ್ಷದ ಅಂತರ ರಾಜ್ಯ ಮಟ್ಟದ ಪುರುಷರ 55 ಕೆ.ಜಿ ಮತ್ತು 65 ಕೆ.ಜಿ ವಿಭಾಗದ ಕಬಡ್ಡಿ ಪಂದ್ಯಾಟ ಕಾರ್ಯಕ್ರಮದಲ್ಲಿ ಅವರು...
1 62 63 64 65 66 957
Page 64 of 957