ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ವಶಕ್ಕೆ : ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ-ಕಹಳೆ ನ್ಯೂಸ್
ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ. ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ತನ್ನ ಬಾಕಿ ಇರುವ ಸಂಬಳದ ಬಿಲ್ ಮಾಡಿಕೊಡಲು ಮತ್ತು ತನ್ನನ್ನು ಹೊರಗುತ್ತಿಗೆ ಆಧಾರದಲ್ಲಿ...







