ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದದಲ್ಲಿ 55 ಜನವಸತಿ ಮನೆಗಳಿಗೆ ರಸ್ತೆ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ತಕ್ಷಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಈ 50 ಮನೆಗಳಿಗೆ ರಸ್ತೆ ನಿರ್ಮಿಸಲು ಪಟ್ಟ ಜಮೀನಿನಲ್ಲಿ ರಸ್ತೆ ಹಾದುಹೋಗಬೇಕಾಗಿದ್ದರಿಂದ ರಸ್ತೆ ಕಾಮಗಾರಿ ವಿಳಂಬವಾಗಿತ್ತು. ಇದನ್ನು ಅರಿತ ಶಾಸಕರು ಸ್ಥಳೀಯ ನಿವಾಸಿಗಳಲ್ಲಿ ಚರ್ಚಿಸಿ...







