ಕರ್ನಾಟಕ ಬಂದ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ -ಕಹಳೆ ನ್ಯೂಸ್
ಮಂಗಳೂರು: ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್‌ಗಳು ಮತ್ತು ಕೆ ಎಸ್ ಆರ್ ಟಿ ಸಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿದ್ದು, ಬಂದರು ಪ್ರದೇಶದಲ್ಲಿ ವ್ಯಾಪಾರ ವಹಿವಾಟುಗಳು ಆರಂಭವಾಗಿದೆ. ಇನ್ನು ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 6 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿಗಳು ಮತ್ತು 50 ಹೋಂ ಗಾರ್ಡ್...







